ಬೆಂಗಳೂರು:ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ರಾಷ್ಟ್ರೀಯ ಪಕ್ಷಗಳನ್ನು ಸೇರುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ.
ಮಹತ್ವದ ಬೆಳವಣಿಗೆ ಒಂದರಲ್ಲಿ ರಾಜಕೀಯದ ಕುರಿತು ಮಾತನಾಡಿರುವ ನಟ ಡಾ. ಶಿವರಾಜ್​ಕುಮಾರ್​ ನನ್ನ ಪತ್ನಿ ಗೀತಾ ಸಂಸದೆ ಆಗುವ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ ಎಂದು ಆಶಿಸಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಅವರು ಈ ಬಗ್ಗೆ ಮಾತನಾಡಿದ್ದಾರೆ.
ಇದನ್ನೂ ಓದಿ:ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ; ಎನ್​ಡಿಎ ಜತೆ ಕೈ ಜೋಡಿಸಿದ ಆರ್​ಎಲ್​ಡಿ
ನಾನು ರಾಜಕೀಯಕ್ಕೆ ಬರುವುದಿಲ್ಲ, ನನಗೆ ಅದರಲ್ಲಿ ಆಸಕ್ತಿ ಇಲ್ಲ. ರಾಜಕೀಯದಲ್ಲಿದ್ದುಕೊಂಡು ಜನರ ಸೇವೆ ಹೇಗೆ ಮಾಡಬೇಕು ಎಂಬುದು ಗೊತ್ತಿಲ್ಲ, ಯಾರಾದರು ಜನ ಕಷ್ಟ ಅಂತ ಬಂದರೆ ಹಣ ಕೊಟ್ಟು ಕಳಿಸುತ್ತೀನಿ. ಆದರೆ ಗೀತಾ ರಾಜಕೀಯದ ಕುಟುಂಬದಿಂದಲೇ ಬಂದವರು. ರಾಜಕೀಯ ಎಂಬುದು ಅವರಿಗೆ ರಕ್ತದಲ್ಲಿಯೇ ಇದೆ. ಅವರು ಎಂಪಿ ಆಗಿ ಆಯ್ಕೆ ಆದರೆ ಬಹಳ ಸಂತೋಷ. ಇದರಿಂದ ಅನೇಕರಿಗೆ ಸ್ಫೂರ್ತಿ ಸಿಗುತ್ತದೆ.
ನಮಗೆ ಸೆಲೆಬ್ರಿಟಿ ಅಂತ ಮತ ಕೊಡುವುದು ಬೇಡ. ಗೀತಾ ಜನರ ಜೊತೆ ಬೆರೆತಾಗ ಸೆಲಬ್ರೆಟಿ ಎಂದು ಬೆರೆಯಲ್ಲ. ಕಳೆದ ಚುನಾವಣೆಯಲ್ಲಿ ಒಂದು ಅವಕಾಶ ಕೊಡಿ ಎಂದು ಕೇಳಿದ್ದೆವು. ಈ ಬಾರಿ ಏನಾಗುತ್ತದೆ ಎಂದು ಕಾದು ನೋಡಬೇಕು. ಒಬ್ಬ ಗಂಡನಾಗಿ ನಾನು ಗೀತಾಗೆ ಬೆಂಬಲಿಸುತ್ತೇನೆ. ಶಿವಮೊಗ್ಗದಲ್ಲಿ ಗೀತಾ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಪ್ರಚಾರದ ಕಡೆ ಗಮನ ನೀಡಿಲ್ಲ. ಉತ್ತಮ ಕೆಲಸಗಳ ಮೂಲಕ ಜನರೊಂದಿಗೆ ಇದ್ದರೆ ಸಾಕು ಎಂದು ನಟ ಡಾ. ಶಿವರಾಜ್​ಕುಮಾರ್​ ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − 9 =
Remember me
