ಉತ್ತರಕನ್ನಡ:ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸಬೇಕೋ ಬೇಡವೋ ಎಂಬ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಶಾಲೆ ಶುರುವಾಗಲು ವಿಳಂಬವಾದರೆ ಮಕ್ಕಳ ಭವಿಷ್ಯಕ್ಕೆ ಮಾರಕವಾಗುತ್ತದೆ ಎಂದು ಕೆಲವರು ಹೇಳುತ್ತಿದ್ದರೆ, ಇನ್ನೊಂದಷ್ಟು ಮಂದಿ, ನಮ್ಮ ಮಕ್ಕಳ ಆರೋಗ್ಯ ಮುಖ್ಯ. ಕರೊನಾ ಪೂರ್ತಿ ನಿಯಂತ್ರಣಕ್ಕೆ ಬಂದ ಹೊರತು ನಮ್ಮ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎನ್ನುತ್ತಿದ್ದಾರೆ.
ಹೀಗಿರುವಾಗ ಕಾರ್ಮಿಕ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಮ್​ ಹೆಬ್ಬಾರ್ ಅವರು, ನಾವು ಮಕ್ಕಳನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ, ತರಗತಿಗಳನ್ನು ಕಳೆದುಕೊಳ್ಳಲು ಸಿದ್ದರಿದ್ದೇವೆ ಎಂದು ನೇರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಹಂಪಿಯಲ್ಲಿ ಭೂಕಂಪ ಸಂಭವಿಸಿಲ್ಲ ಎಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರದಲ್ಲಿ ಮಾತನಾಡಿದ ಅವರು, ಶಾಲೆ ಪ್ರಾರಂಭದ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಕರೊನಾ ನಿರ್ವಹಣೆಯಲ್ಲಿ ಬಿಜೆಪಿ ವಿಫಲವಾಗಿದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಿವರಾಮ್​ ಹೆಬ್ಬಾರ್​ ಅವರು, ಅಷ್ಟು ದೊಡ್ಡವರ ಬಗ್ಗೆ ನಾನು ಯಾಕೆ ಮಾತನಾಡಲಿ? ಅದರ ಬಗ್ಗೆ ದೊಡ್ಡವರೇ ಉತ್ತರ ಕೊಡುತ್ತಾರೆ.
ಸರ್ಕಾರದ ನಿರ್ಣಯಗಳನ್ನು ನಾಲ್ಕು ಸಲ ಡಿ.ಕೆ.ಶಿವಕುಮಾರ್​, ಸಿದ್ದರಾಮಯ್ಯನವರು ಹೊಗಳಿದ್ದಾರೆ. ಆದರೂ ಒಳ್ಳೆಯ ಕೆಲಸ ಮಾಡಿದಾಗಲೂ ಕೊಂಕು ನುಡಿದಾಗ ಸಿಟ್ಟು ಬರುತ್ತದೆ. ರಾಜಕೀಯ ಮಾಡಬೇಕಲ್ಲ. ಅಲ್ಪಸ್ವಲ್ಪವಾದರೂ ಏನಾದರೂ ಮಾಡದೆ ಇದ್ದರೆ, ಅವರು ರಾಜಕಾರಣ ಮಾಡುವುದು ಹೇಗೆ ಎಂದು ಹೇಳಿದರು.
ಇದನ್ನೂ ಓದಿ:ಕಳ್ಳತನ ಇಲ್ಲವೇ ಭಿಕ್ಷೆ ಬೇಡಿಯಾದ್ರೂ ಲ್ಯಾಪ್​ಟಾಪ್ ​ತಗೋಬೇಕಂತೆ.. ವಿದ್ಯಾರ್ಥಿಗಳಿಗೆ ಪ್ರೊಫೆಸರ್​ ವಾರ್ನಿಂಗ್!
ಉಪಚುನಾವಣೆಯಲ್ಲಿ ಗೆದ್ದವರು ತಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಎಂಟಿಬಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವೆಲ್ಲರೂ ಎಂಟಿಬಿ ಜತೆಗಿದ್ದೇವೆ. ಅವರ ಪರ ಯಡಿಯೂರಪ್ಪನವರಿಗೆ ವಿನಂತಿ ಮಾಡುತ್ತೇವೆ. ಎಂಟಿಬಿ ನಮ್ಮೆಲ್ಲರ ಸ್ನೇಹಿ. ಅವರನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ಸರ್ಕಾರ ರಚಿಸುವಲ್ಲಿ ಅವರ ಪಾತ್ರ ತುಂಬ ಮಹತ್ವದ್ದು ಎಂದು ಹೇಳಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − four =
Remember me
