ಬೆಂಗಳೂರು:ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶಿವರಾತ್ರಿ ಅಂಗವಾಗಿ ಶಿವನ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಹಾಗೂ ಶಿವನಿಗೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
ಬೆಂಗಳೂರಿನ ಕೆಂಗೇರಿ, ಯಶವಂತಪುರ, ಮಲ್ಲೇಶ್ವರ, ಮನವರ್ತಪೇಟೆ ಮುಂತಾದ ಕಡೆ ಶಿವನ ದೇಗಲುಗಳಲ್ಲಿ ಪೂಜಾ ಕೈಂಕರ್ಯಗಳ ಬೆಳಗ್ಗೆಯಿಂದಲೇ ಆರಂಭಗೊಂಡವು.
ಇನ್ನು ಉಳಿದಂತೆ ಜಿಲ್ಲೆಗಳಲ್ಲಿ ಪ್ರಖ್ಯಾತ ಶಿವನ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಪೂಜೆಗಳು ಆರಂಭವಾದವು. ಪ್ರಖ್ಯಾತ ಯಾತ್ರಾ ಸ್ಥಳ ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಮುಗಿಲು ಮುಟ್ಟಿತ್ತು.
ಶ್ರೀ ಮಹಾಬಲೇಶ್ವರ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ರಾಜ್ಯ, ಹೊರ ರಾಜ್ಯಗಳಿಂದ ಭಕ್ತರು ಬಂದು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಆತ್ಮಲಿಂಗಕ್ಕೆ ಪೂಜೆ ಅಭಿಷೇಕ ಭಕ್ತರು ಸಲ್ಲಿಸಿದರು. ಮುರ್ಡೇಶ್ವರ, ಯಾಣ, ಕವಳೇಶ್ವರನ ಸನ್ನಿಧಿಯಲ್ಲೂ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ಚಾಮರಾಜನಗರ ಜಿಲ್ಲೆಯ ಮಹದೇಶ್ವರನ ಬೆಟ್ಟಕ್ಕೆ ಭಕ್ತರು ಹರಿದುಬಂದಿದ್ದಾರೆ. ಫಲಪುಷ್ಪ ಅಲಂಕಾರದಿಂದ ಮಲೆಮಹದೇಶ್ವರ ದೇವಸ್ಥಾನ ಕಂಗೊಳಿಸುತ್ತಿದೆ. ನಾನಾ ಬಗೆಯ ಹಣ್ಣು, ತರಕಾರಿ ಹಾಗೂ ಹೂಗಳಿಂದ ಶೃಂಗಾರ ಮಾಡಲಾಗಿದೆ.
ಬೆಳಗಿನ ಜಾವ 3 ಗಂಟೆಯಿಂದಲೇ ಪೂಜಾ ಕೈಂಕರ್ಯ ಆರಂಭಗೊಂಡವು. ರುದ್ರಾಭಿಷೇಕ, ಕ್ಷೀರಾಭಿಷೇಕ, ಶತಬಿಲ್ವಾರ್ಚನೆ ಮೊದಲಾದ ಪೂಜೆಗಳು ನಡೆದವು. ಬೆಳಗ್ಗೆಯಿಂದಲೇ ಸಾಲುಗಟ್ಟಿದ ಭಕ್ತರು ಮಹದೇಶ್ವರನ ದರ್ಶನ ಪಡೆದರು.
ಗಣಿನಾಡು ಬಳ್ಳಾರಿಯಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು. ಶಿವನ ದೇವಸ್ಥಾನಗಳಿಲ್ಲಿ ವಿಶೇಷ ಪೂಜೆ ಪುರಸ್ಕಾರ ನಡೆಯುತ್ತಿವೆ. ಕೋಟೆ ‌ಮಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆಗಳು ನಡೆದವು. ಉಪವಾಸವಿರೋ ಭಕ್ತರು ವಿಶೇಷ ಪೂಜೆ ನೆರವೇರಿಸಿದರು.
ಬಳ್ಳಾರಿ ತಾಲೂಕಿನ ಅಲ್ಲಿಪುರದ ಜ್ಯೋತಿರ್ಲಿಂಗ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಗಿತ್ತು. ದೇಶದ ನಾನಾ ಭಾಗದಲ್ಲಿರೋ 18 ಜ್ಯೋತಿರ್ಲಿಂಗಗಳನ್ನು ಈ ದೇವಸ್ಥಾನದಲ್ಲಿ ಸ್ಥಾಪಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
