ಬೆಂಗಳೂರು: ಚಂದ್ರಯಾನ-3 ಮಿಷನ್‌ನ ವಿಕ್ರಮ್ ಲ್ಯಾಂಡರ್ ನೌಕೆಯು ಚಂದ್ರನ ದಕ್ಷಿಣ ಧ್ರುವದ ಅಂಗಳವನ್ನು ಸ್ಪರ್ಶಿಸಿದ ಸ್ಥಳಕ್ಕೆ ಶಿವಶಕ್ತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಮಕರಣ ಮಾಡುವ ಮೂಲಕ ವಿಜ್ಞಾನ ಮತ್ತು ಆಧ್ಯಾತ್ಮವನ್ನು ಒಗ್ಗೂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರಿನ ನಾಗಸಂದ್ರದ ವಸತಿ ಸಮುಚ್ಚಯವೊಂದರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಂದ್ರಯಾನ 3 ಯಶಸ್ವಿ ಉಡಾವಣೆಗೆ ಕಾರಣರಾದ ವಿಜ್ಞಾನಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಇಸ್ರೊ ವಿಜ್ಞಾನಿಗಳ ನಿರಂತರ ದಣಿವಿಲ್ಲದ ಶ್ರಮದ ಫಲವಾಗಿ ವಿಶ್ವಮಟ್ಟದಲ್ಲಿ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ಭಾರತ ನಿಲ್ಲುವಂತಾಗಿದೆ ಎಂದರು.
ವಿಜ್ಞಾನ, ತಂತ್ರಜ್ಞಾನ ಕೃಷಿ ಸೇರಿ ಎಲ್ಲ ರಂಗಗಳಲ್ಲಿ ಕರ್ನಾಟಕ ಮುಂದಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಅಗತ್ಯ ನೆರವು ನೀಡಿತ್ತು. ಮೋದಿಯವರ ದೂರದೃಷ್ಟಿಯ ನಾಯಕತ್ವ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯತೆಯಿಂದ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ದೊರೆತಿದೆ ಎಂದು ಹೇಳಿದರು.
ಇಸ್ರೋ ವಿಜ್ಞಾನಿಗಳ ಒಗ್ಗಟ್ಟಿನ ಶ್ರಮದ ಫಲವಾಗಿ ಚಂದ್ರಯಾನ 3 ಯಶಸ್ವಿಯಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಘನತೆ ಹೆಚ್ಚಾಗುವಂತೆ ಮಾಡಿದೆ. ಅಲ್ಲದೆ, ವಿಜ್ಞಾನ ಮತ್ತು ಆಧ್ಯಾತ್ಮವನ್ನೂ ಬೆಸೆಯುವಂತೆ ಮಾಡಿದೆ ಎಂದು ಬೊಮ್ಮಾಯಿ ಪುನರುಚ್ಚರಿಸಿದರು.
ಇಸ್ರೋ ವಿಜ್ಞಾನಿಗಳಾದ ಮನೀಷ್ ಚಾವ್ಲ, ಕಲ್ಪನಾ ಅರವಿಂದ್ ಹಾಗೂ ಆಕಾಂಕ್ಷ ಭಾರದ್ವಾಜ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು, ವಸತಿ ಸಮುಚ್ಚಯ ನಿವಾಸಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಇನ್ನಿತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
