ಬೆಂಗಳೂರು: ಕೃಷಿಗೆ ಸಂಬಂಧಿಸಿದ ವಿವಿಧ ವಿಶ್ವವಿದ್ಯಾಲಯಗಳನ್ನು ಒಂದೇ ಸೂರಿನಡಿ ತಂದು ಸಮಗ್ರ ಕೃಷಿ ವಿಶ್ವವಿದ್ಯಾಲಯ ರೂಪಿಸಿ, ಏಕಗವಾಕ್ಷಿ ಪದ್ಧತಿಯಡಿ ರೈತರಿಗೆ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಭಾರತೀಯ ವಿಸ್ತರಣಾ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ವತಿಯಿಂದ ಗುರುವಾರ ಜಿಕೆವಿಕೆಯಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಸಮ್ಮೇಳನ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೃಷಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಗಳ ನಡುವಿನ ಸಂವಹನ ಕೊರತೆಯಿಂದ ರೈತರಿಗೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡು ಸಮಗ್ರ ಕೃಷಿ ವಿವಿ ಸ್ಥಾಪಿಸಲಾಗುವುದು. 2030ರ ವೇಳೆಗೆ ಸುಸ್ಥಿರ ಆಹಾರೋತ್ಪಾದನೆಗೆ ಒತ್ತು ನೀಡಲಾಗುವುದು. ಉತ್ಪಾದಕ ಮತ್ತು ಉತ್ಪಾದನೆ ಹೆಚ್ಚಿಸಲು, ಪರಿಸರ ಸಂರಕ್ಷಿಸಲು, ಹವಾಮಾನ ವೈಪರಿತ್ಯ ಎದುರಿಸಲು, ಭೂಮಿಯ ಗುಣಮಟ್ಟ ಹೆಚ್ಚಿಸಲು ಆಧುನಿಕ ಕೃಷಿ ವಿಧಾನಗಳನ್ನು ಅಳವಡಿಸುವ ಅಗತ್ಯವಿದೆ.
ಇದನ್ನೂ ಓದಿ:ರಾಜ್ಯದಲ್ಲಿರುವುದು ಪರ್ಸೆಂಟೇಜ್​ ಸರ್ಕಾರ: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ
ದ್ವಿತೀಯ ಕೃಷಿ ಮೂಲಕ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ದೇಶ ಆಹಾರ ಕೊರತೆ ಎದುರಿಸುತ್ತಿತ್ತು. ರೈತರ ಪರಿಶ್ರಮದಿಂದ ಈಗ ಸ್ವಾವಲಂಬನೆ ಸಾಧಿಸುವ ಮೂಲಕ ಹೊರ ದೇಶಗಳಿಗೂ ಸಾಕಷ್ಟು ಪ್ರಮಾಣದಲ್ಲಿ ರ್ತು ಮಾಡಲಾಗುತ್ತಿದೆ ಎಂದರು.
ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧಿಕಾರ ಸಿಇಒ ಡಾ.ಅಶೋಕ್ ಎಂ.ದಳವಾಯಿ ಮಾತನಾಡಿ,ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವಲ್ಲಿ ಕೃಷಿ ವಿಸ್ತರಣೆ ಸಂಸ್ಥೆಯು ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿ ವಿಸ್ತರಣಾ ವಿಭಾಗವು ಕೃಷಿ ವಿಸ್ತರಣಾ ನಿರ್ವಹಣೆ ವಿಭಾಗವಾಗಿ ಮರುನಾಮಕರಣಗೊಳ್ಳುವುದು ಅವಶ್ಯಕವಾಗಿದೆ. ದ್ವಿತೀಯ ಕೃಷಿಗೆ ಮಾರುಕಟ್ಟೆ ಕಲ್ಪಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಗ್ರ ರೂಪುರೇಷಗಳನ್ನು ಸಿದ್ಧಪಡಿಸಬೇಕಿದೆ. ಕೃಷಿಯಿಂದ ವಿಮುಕ್ತರಾಗುತ್ತಿರುವ ಜನತೆಯನ್ನು ಕೃಷಿಯತ್ತ ಆಕರ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 12 =
Remember me
