ಬೆಂಗಳೂರು:ಹನುಮಾನ್ ಚಾಲೀಸಾ ಪಠಣ ಮಾಡಿ ನಮ್ಮ ಭಕ್ತಿಯನ್ನು ತೋರಿಸಿದ್ದೇವೆ. ನಿಮಗೆ ಹನುಮಾನ್ ಚಾಲೀಸಾ ಬರುತ್ತದೆಯಾ ಎಂದು ಸಾವಲೆಸೆದಿದ್ದರು. ಅವರ ಸವಾಲನ್ನು ಸ್ವೀಕರಿಸಿ ಇಂದು ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣ ಮಾಡಿದ್ದೇವೆ. ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಾವೆಲ್ಲ ಬಜರಂಗಿಗಳು, ಆಂಜನೇಯನ ಭಕ್ತರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಇದನ್ನೂ ಓದಿ:ಮುಂದಿನ 6 ದಿನಗಳಲ್ಲಿ ಹಿಂದುಗಳು ಏನೆಂಬುದನ್ನು ತೋರಿಸುತ್ತೇವೆ; ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಚಕ್ರವರ್ತಿ ಸೂಲಿಬೆಲೆ
ಮಲ್ಲೇಶ್ವರದ ಶ್ರೀರಾಮ ಮಂದಿರದಲ್ಲಿ ಹನುಮಾನ್ ಚಾಲೀಸಾ ಪಠಣದ ಬಳಿಕ ಶೋಭಾ ಕರಂದ್ಲಾಜೆ ಮಾತನಾಡುತ್ತಾ, ನಾಳೆಯಿಂದ ಮನೆ ಮನೆಯಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುತ್ತಾರೆ. ಭೂತ ಪಿಶಾಚಿ ಓಡಿಸುವ ಉಲ್ಲೇಖ ಹನುಮಾನ ಚಾಲೀಸಾದಲ್ಲಿದೆ. ನಾಳೆಯಿಂದ ಎಲ್ಲರೂ ಭೂತ ಪಿಶಾಚಿಗಳನ್ನು ಹೊಡಿಸುವ ಕೆಲಸ ಮಾಡುತ್ತಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್​​ಗೆ ತಿರುಗೇಟು ಕೊಟ್ಟರು.
ಇದನ್ನೂ ಓದಿ:ಸಿದ್ದರಾಮಯ್ಯ ಪರ ಪ್ರಚಾರ; ಶಿವರಾಜ್ ಕುಮಾರ್​ಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ!
ಆಂಜನೇಯನ ಅಪ್ಪ ಯಾರು, ಅಮ್ಮ ಯಾರು ಎಂದು ಗೊತ್ತಿಲ್ಲದ ಕಾಂಗ್ರೆಸ್ ನಾಯಕರು ಬಜರಂಗಿಯ ಭಕ್ತರಿಗೆ ಸವಾಲು ಹಾಕಿದ್ದರು. ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರು. ಅದಕ್ಕಾಗಿ ಇಂದು ಹನುಮಾನ್ ಚಾಲೀಸಾ ಪಠಣ ಮಾಡಿದ್ದೇವೆ. ಕಾಂಗ್ರೆಸ್‌ನವರಿಗೆ ಆಂಜನೇಯ ರಾಜಕಾರಣದ ವಿಚಾರವಾದರೆ, ನಮಗಿದು ಭಕ್ತಿಯ ವಿಚಾರ. ಒಂದು ಸಮುದಾಯವನ್ನು ಓಲೈಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನವರು ಬಜರಂಗದಳವನ್ನು ಬ್ಯಾನ್ ಮಾಡುವ ವಿಚಾರಕ್ಕೆ ಮುಂದಾಗಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
