– ಕೆಪಿಸಿಸಿ ಅಧ್ಯಕ್ಷ, ಪಕ್ಷದ ಅಭ್ಯರ್ಥಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಬೆಂಗಳೂರು:ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವುದಕ್ಕಾಗಿ ಕಾಂಗ್ರೆಸ್ ಪಕ್ಷ ಲಂಚ ಪಡೆದಿದ್ದು, ಕಾಯ್ದೆ ರೀತ್ಯ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗೆ ಸಂಸದೆ ಹಾಗೂ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಶುಕ್ರವಾರ ದೂರು ಸಲ್ಲಿಸಿದ್ದಾರೆ.
ಚುನಾವಣೆ ಹಕ್ಕು ಕಾಯ್ದೆಯು ಮತದಾರರಿಗೆ ಮಾತ್ರವಲ್ಲ, ಅಭ್ಯರ್ಥಿಗಳು ಹಾಗೂ ಬಿ ಫಾರ್ಮ್ ವಿತರಿಸುವ ಪಕ್ಷಗಳಿಗೂ ಅನ್ವಯಿಸುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಯು ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಹಣ ವಸೂಲಿ ಮಾಡಿರುವುದನ್ನು ಎತ್ತಿ ತೋರಿಸುತ್ತದೆ.
ಇದನ್ನೂ ಓದಿ:ಇದುವರೆಗೆ 9 ಮರಿಗಳಿಗೆ ಜನ್ಮ ನೀಡಿದ್ದ ಆನೆ; 10ನೇ ಹೆರಿಗೆ ವೇಳೆ ಮೃತ್ಯು!
ಮಾಧ್ಯಮಗಳಲ್ಲಿ ಪ್ರಕಟಿತ ವರದಿ ಪ್ರಕಾರ 1,350 ಆಕಾಂಕ್ಷಿಗಳಿಂದ 23 ಕೋಟಿ ರೂ.ಗಳನ್ನು ಕೆಪಿಸಿಸಿ ಸಂಗ್ರಹಿಸಿದೆ. ಇದು ಸ್ಪಷ್ಟವಾಗಿ ಚುನಾವಣೆ ಹಕ್ಕು ಕಾಯ್ದೆ ಉಲ್ಲಂಘಿಸಿದೆ. ಲಂಚ ಕೊಡುವುದು ಅಥವಾ ಪಡೆಯುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮವಹಿಸಿ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೀಡಿದ ಎಲ್ಲ ಬಿ ಫಾರ್ಮ್ ಗಳನ್ನು ರದ್ದುಪಡಿಸಿ ಕ್ರಮವಹಿಸಬೇಕು ಎಂದು ಶೋಭಾ ಕರಂದ್ಲಾಜೆ ಕೋರಿದ್ದಾರೆ.
ಕಳೆದ ಹದಿನೈದು ವರ್ಷದಿಂದ ಒಂದು ಮನೆ ಬಿಟ್ಟು ಬೇರೆ ಏನೂ ಖರೀದಿ ಮಾಡಿಲ್ಲ : ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − fifteen =
Remember me
