ಚಿಕ್ಕಮಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಬಿಜೆಪಿ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಇನ್ನು ಈ ಕುರಿತು ಮಾತನಾಡಿರುವ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಟ್ಟುಕೊಂಡಿರುವುದು ತುರ್ತು ಸಂದರ್ಭಕ್ಕಅಗಿಯೇ ಹೊರತು ಕರ್ನಾಟಕಕ್ಕೆ ಕೊಡುವುದಕ್ಕೆ ಅಲ್ಲ. ಬರ, ಸಾಂಕ್ರಾಮಿಕ, ನೆರೆಯಂತಹ ಸಂದರ್ಭಗಳನ್ನು ನಿಭಾಯಿಸಲೆಂದು ಅಕ್ಕಿಯನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ. ಬೇರೆ ರಾಜ್ಯಗಳಿಂದ ಅಥವಾ ರೈತರಿಂದ ಅಕ್ಕಿಯನ್ನು ಖರೀದಿಸಿ ಕಾಂಗ್ರೆಸ್​ನವರು ಜನತೆಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಯೋಗ ಜನಪ್ರಿಯಗೊಳಿಸಿದ್ದು ನೆಹರು ಎಂದ ಕಾಂಗ್ರೆಸ್​​; ಬಿಜೆಪಿ ತಿರುಗೇಟು
ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗದೆ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡುತ್ತಿದ್ಧಾರೆ. ಗ್ಯಾರಂಟಿಗ ಹೆಸರಿನಲ್ಲಿ ಮತ ಪಡೆದಿರುವ ಸಿದ್ದರಾಮಯ್ಯನವರು ಅಧಿಕಾರ ನಡೆಸುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್​ನವರು ಗ್ಯಾರಂಟಿಗಳನ್ನು ಘೊಷಣೆ ಮಾಡಿದಾಗಲೇ ಹಣ ಎಲ್ಲಿಂದ ತರುತ್ತೀರಿ ಎಂದು ನಾವು ಆವರನ್ನ ಪ್ರಶ್ನಿಸಿದ್ದೆವು. ಜನರ ಮೂಗಿಗೆ ತುಪ್ಪ ಸವರಿ ಮತ ಪಡೆದ ಕಾಂಗ್ರೆಸ್​ ಈಗ ಮೋಸ ಮಾಡುತ್ತಿದೆ. ಕೇಂದ್ರ ಸರ್ಕಾರ ಕೊಡುವ 5 ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿ 10 ಕೆಜಿ ಕೊಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 1 =
Remember me
