ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನ ಕೆಳಗಿಳಿಸುತ್ತಿದ್ದಂತೆಯೇ ಜೆಡಿಎಸ್ ಮತ್ತೊಂದು ಶಾಕ್ ಎದುರಾಗಿದೆ. ವಿಧಾನಸೌಧದಲ್ಲಿ ಜೆಡಿಎಸ್ ಪಕ್ಷಕ್ಕೆ ನೀಡಿರುವ ಕೊಠಡಿ ವಾಪಸ್ ಪಡೆಯುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ.
ಪ್ರೊ.ಸಿ.ಎಸ್.ಸಿದ್ದರಾಜು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ದೂರು ನೀಡಿದ್ದು, ಜೆಡಿಎಸ್‌ಗೆ ವಿಧಾನಸೌಧದಲ್ಲಿ ನೀಡಿರುವ ಕಚೇರಿಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಚೇರಿ ಪಡೆಯಲು ಅರ್ಹತೆ ಪಡೆದಿಲ್ಲ. ಕೊಠಡಿ ನೀಡಿರುವುದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ವಿಧಾನಸೌಧದಲ್ಲಿರುವ ಕೊಠಡಿ ಸಂಖ್ಯೆ 140-141ನ್ನು ಜೆಡಿಎಸ್ ಶಾಸಕಾಂಗ ನಾಯಕನಿಗೆ ನೀಡಿರುವ ಕಚೇರಿಯನ್ನು ವಾಪಸ್ಸು ಪಡೆಯಬೇಕೆಂದು ಸಿದ್ದರಾಜು ವಿನಂತಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
