ಬೆಂಗಳೂರು:ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಎರಡು ಮತ್ತು ಮೂರನೇ ವರದಿಗಳನ್ನು ಆಯೋಗದ ಅಧ್ಯಕ್ಷ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಶುಕ್ರವಾರ ಮುಖ್ಯಮಂತ್ರಿಯವರಿಗೆ ಸಲ್ಲಿಸಿದ್ದು, ಮಹತ್ವದ ಶಿಫಾರಸು ಮಾಡಿದ್ದಾರೆ.
ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿ ಇತ್ಯಾದಿಗಳಲ್ಲಿ ಆಗುವ ಅನುಪಯುಕ್ತ ವೆಚ್ಚ ತಡೆಯುವ ಕುರಿತು ಸಲಹೆ ನೀಡಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ ರಚಿಸಿ ಎಂದು ಆಯೋಗ ಸಲಹೆ ನೀಡಿದೆ. ಜತೆಗೆ ಹೊರ ಗುತ್ತಿಗೆ ನೇಮಕದಲ್ಲೂ ಎಸ್ಸಿ, ಎಸ್ಟಿಗೆ ಮೀಸಲು ಇರಲಿ. ಪೊಲೀಸ್ ಪಡೆಗಳಲ್ಲಿ ಕಾನ್ಸ್​ಟೇಬಲ್​ನಿಂದ ಸಬ್-ಇನ್​ಸ್ಪೆಕ್ಟರ್​ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳಲ್ಲಿ ನೇರ ನೇಮಕಾತಿ ಯಲ್ಲಿ ಮಹಿಳೆಯರಿಗೆ, ಸಮತಳವಾಗಿ ಮತ್ತು ಪ್ರತಿ ವರ್ಗದಲ್ಲಿ (ಎಸ್​ಸಿ, ಎಸ್​ಟಿ, ಒಬಿಸಿ, ಇತರರು) ಶೇ.33 ಮೀಸಲಾತಿ ಅನುಮೋದಿಸಬಹುದು ಎಂದು ಹೇಳಿದೆ.
ಕೇಂದ್ರ ಸರ್ಕಾರವು ತನ್ನ ಸಚಿವಾಲಯಗಳಲ್ಲಿ ಯಾವುದೇ ಕಡತವು ನಾಲ್ಕು ಹಂತಗಳಿಗಿಂತ ಹೆಚ್ಚು ಚಲನವಲನವಾಗಬಾರದು ಎಂದು ನಿರ್ಧರಿಸಿರುವಂತೆ ರಾಜ್ಯ ಸರ್ಕಾರವು ಸಹ ಸಚಿವಾಲಯದಲ್ಲಿ ಯಾವುದೇ ಇಲಾಖೆಯ ಕಡತಗಳು ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚು ಚಲನವಲನವಾಗಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದೆ.
74ನೇ ಸಾಂವಿಧಾನಿಕ ತಿದ್ದುಪಡಿ ಕಾಯಿದೆಯನ್ವಯ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಮಹಾನಗರಗಳಿಗೆ ಮಹಾನಗರ ಯೋಜನಾ ಸಮಿತಿ ರಚನೆ ಮಾಡಬಹುದು ಎಂದೂ ಸಹ ಹೇಳಲಾಗಿದೆ. ವರದಿಯ ಮುಖ್ಯಾಂಶಗಳ ಮಾಹಿತಿ ಪಡೆದ ಮುಖ್ಯಮಂತ್ರಿಗಳು ವರದಿಯಲ್ಲಿ ಮಾಡಿರುವ ಶಿಫಾರಸುಗಳನ್ನು ಪರಿಶೀಲಿಸಿ, ಕೂಡಲೇ ಜಾರಿಗೊಳಿಸಲು ಸಾಧ್ಯವಿರುವ ಅಂಶಗಳನ್ನು ಅನುಷ್ಠಾನಕ್ಕೆ ತರಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಮೊದಲ ವರದಿಯಲ್ಲಿ 3 ಇಲಾಖೆಗಳಾದ ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಸಾರಿಗೆ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 856 ಶಿಫಾರಸುಗಳನ್ನು ಮಾಡಿ ಜುಲೈ 2021 ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ವಂದಿತಾ ಶರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟೆಂಡರ್ ವ್ಯವಸ್ಥೆ ಬದಲಿಸಿ:ಅತಿ ಹೆಚ್ಚಿನ ಮೌಲ್ಯದ ಟೆಂಡರ್​ಗಳನ್ನು ಕರೆಯುವ ಮೊದಲು ಕರಡು ಬಿಡ್ ಡ್ಯಾಕ್ಯುಮೆಂಟ್​ನ್ನು ಇ-ಪೊ›ಕ್ಯುರ್​ವೆುಂಟ್ ವೆಬ್​ಸೈಟ್ ಮೂಲಕ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬಹುದು. ಆಕ್ಷೇಪಣೆಗಳಿಗೆ ಇಲಾಖೆಗಳು ತಮ್ಮ ನಿರ್ಧಾರಗಳನ್ನು ದಾಖಲಿಸಬೇಕು ನಂತರವೇ ಬಿಡ್ ಡ್ಯಾಕ್ಯುಮೆಂಟ್ ಅಂತಿಮಗೊಳಿಸಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.
ವಿಲೀನ ಮಾಡುವುದಾದರೆ ಯಾವುದು ಸೂಕ್ತ?:ಸಾರ್ವಜನಿಕ ಉದ್ಯಮಗಳ ಇಲಾಖೆಯನ್ನು ಆರ್ಥಿಕ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ರಸ್ತೆ ಅಭಿವೃದ್ಧಿ ಸಂಸ್ಥೆಯನ್ನು ವಿಲೀನಗೊಳಿಸಬಹುದು. ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ಇಂಧನ ಇಲಾಖೆಗೆ ವರ್ಗಾಯಿಸುವುದು, ನಂತರ ಇಂಧನ ಇಲಾಖೆಯ ಆಡಳಿತದ ನಿಯಂತ್ರಣದಲ್ಲಿರಿಸಿ ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ಧಿ ನಿಗಮದ ಜತೆ ವಿಲೀನ ಮಾಡಬಹುದು. ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಒಟ್ಟಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಗಳ ಒಟ್ಟಿಗೆ ಕಾರ್ಯನಿರ್ವಹಿಸುವಂತೆಯೂ ಆದೇಶ ಮಾಡಬಹುದು.
ಭೂಸ್ವಾಧೀನ ಪರಿಹಾರ ಧನಕ್ಕೆ ಆಧಾರ್ ಜೋಡಿಸಲು ಸಲಹೆ:ಭೂಸ್ವಾಧೀನಕ್ಕೆ ಪರಿಹಾರ ಧನದ ಪಾವತಿಯು ಕಾಲಮಿತಿಯದ್ದಾಗಿರಬೇಕು. ಕಾಲಮಿತಿಯಲ್ಲಿ ಪಾವತಿಸದಿದ್ದರೆ ವಿಳಂಬವಾದ ಅವಧಿಗೆ ಅನವಶ್ಯಕಾಗಿ ಹೆಚ್ಚುವರಿ ಪರಿಹಾರ ಧನವನ್ನು ಪಾವತಿಸಬೇಕಾಗುತ್ತದೆ ಹಾಗಾಗಿ ಇದನ್ನು ಭೂ ಕೋರಿಕೆ ಸಂಸ್ಥೆಗಳು ಮತ್ತು ಕಂದಾಯ ಇಲಾಖೆಯು ಸಕಾಲ ಸೇವೆಯಾಗಿ ಅಧಿಸೂಚಿಸಬೇಕು. ಪರಿಹಾರ ಧನವನ್ನು ಆಧಾರ್ ಆಧಾರಿತ ಪಾವತಿ ಮಾಡುವಂತೆ ಪ್ರಕ್ರಿಯೆಗೊಳಿಸಬೇಕು ಇದರಿಂದ ಚೆಕ್ ಮೂಲಕ ಪರಿಹಾರ ಧನ ಪಾವತಿಯಲ್ಲಾಗುವ ವಂಚನೆಯನ್ನು ತಡೆಗಟ್ಟಬಹುದು ಎಂದು ಶಿಫಾರಸು ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + nine =
Remember me
