ಬೆಂಗಳೂರು:ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​ಸಿ) ನಾಗರಿಕ ಸೇವೆಗಳ ಮುಖ್ಯಪರೀಕ್ಷೆ ಮತ್ತು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್​ಸಿ) ಮುಖ್ಯ ಪರೀಕ್ಷೆಗಳ ನಡುವೆ ಹೆಚ್ಚಿನ ಅಂತರ ಇಲ್ಲದಂತೆ ವೇಳಾಪಟ್ಟಿ ರೂಪಿಸಿರುವುದು, ಎರಡೂ ಪರೀಕ್ಷೆಗಳಿಗೆ ಸಿದ್ಧರಾಗಿರುವ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದೆ.
ಯುಪಿಎಸ್​ಸಿ ಪರೀಕ್ಷೆಗಳು ಜ.8 ರಿಂದ 10 ಹಾಗೂ 16, 17ರಂದು ನಡೆಯಲಿವೆ. ಕೆಪಿಎಸ್​ಸಿ ಪರೀಕ್ಷೆಗಳು ಡಿ.21 ರಿಂದ 24 ಮತ್ತು ಜ.2ರಿಂದ 5ರವರೆಗೆ ನಿಗದಿಯಾಗಿವೆ. ಆದರೆ ಎರಡೂ ಪರೀಕ್ಷೆಗಳ ನಡುವೆ ಅಂತರ ಕಡಿಮೆ ಇರುವುದರಿಂದ ವಿದ್ಯಾರ್ಥಿಗಳು ಪೂರ್ವ ಸಿದ್ಧತೆ ನಡೆಸಲು ಕಷ್ಟವಾಗುತ್ತದೆ. ಕೆಪಿಎಸ್​ಸಿ ವೇಳಾಪಟ್ಟಿಯನ್ನು ಪರಿಷ್ಕೃರಿಸಿ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡಬೇಕೆಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.
ಕೆಪಿಎಸ್​ಸಿ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ ಹುದ್ದೆಗಳ ಮುಖ್ಯಪರೀಕ್ಷೆ ಡಿ.21ರಿಂದ 24ರವರೆಗೆ ಹಾಗೂ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಮುಖ್ಯ ಪರೀಕ್ಷೆ ೆ ಜ.2ರಿಂದ 5ರವರೆಗೆ ನಿಗದಿಯಾಗಿದೆ. ಜನವರಿಯಲ್ಲಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆಗಸ್ಟ್​ನಲ್ಲಿ ಪೂರ್ವ ಭಾವಿ ಪರೀಕ್ಷೆ ನಡೆಸಿ, ಇತ್ತೀಚಿಗೆ ಫಲಿತಾಂಶ ಬಿಡುಗಡೆ ಮಾಡಲಾಗಿತ್ತು.
ಎರಡೂ ಒಂದೇ ಅಲ್ಲ:ಯುಪಿಎಸ್​ಸಿ ಪರೀಕ್ಷೆಗಳಿಗೆ ಸಿದ್ಧರಾಗುವವರು ಕೆಎಎಸ್ ಪರೀಕ್ಷೆಗಳಿಗೂ ಸಿದ್ಧತೆ ನಡೆಸಿರುತ್ತಾರೆ. ಆದರೆ ತಯಾರಿ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ನಿರಂತರವಾಗಿ ಪರೀಕ್ಷೆಗಳನ್ನು ಎದುರಿಸಬೇಕಾದಾಗ
ಎದುರಿಸುವ ತೊಂದರೆಗಳನ್ನು ಸರ್ಕಾರ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ನಿಗದಿ ಪಡಿಸಬೇಕಿತ್ತು ಎಂಬುದು ಅಭ್ಯರ್ಥಿಗಳ ಆಗ್ರಹವಾಗಿದೆ. ಈ ವಿಚಾರವಾಗಿ ಕೆಪಿಎಸ್​ಸಿ ಕಾರ್ಯದರ್ಶಿ ಪ್ರತಿಕ್ರಿಯೆ ಪಡೆಯಲು ಸಂರ್ಪಸಿದ್ದು, ಕರೆ ಸ್ವೀಕರಿಸಲಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
