ಬೆಂಗಳೂರು:ಕಾಂಗ್ರೆಸ್ಸೇ ವಿಪಕ್ಷವಾಗಿ ಬೀದಿಗಿಳಿದು ‘ನಾನು ಕಳ್ಳ ಅಲ್ಲ, ನಾನು ಕಳ್ಳ ಅಲ್ಲ, ನನ್ನ ನಂಬಿರಿ’ ಎಂದು ಹೇಳುವುದನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷವು ವಿಪಕ್ಷವಾಗಲು ತಯಾರಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಚುನಾವಣೆಗೆ ಡೆಪಾಸಿಟ್ ಕಟ್ಟಲು 250 ರೂ. ಸಹ ಇರಲಿಲ್ಲ: ಮುಡಾ ಆರೋಪದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಸಿದ್ದರಾಮಯ್ಯ
ಮಂಡ್ಯದ ಪ್ರೆಸ್​ಕ್ಲಬ್ ನಲ್ಲಿ ಕಾಂಗ್ರೆಸ್ ಹಗರಣಗಳ ಸರ್ಕಾರದ ಕುರಿತು ಪುಸ್ತಕ ಬಿಡುಗಡೆ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು, ಆಡಳಿತರೂಢ ಕಾಂಗ್ರೆಸ್ ಪಕ್ಷವು ದಾಖಲೆಗಳನ್ನು ಕೊಟ್ಟು ಸರ್ಕಾರ ಸ್ವಚ್ಛ, ಪಾರದರ್ಶಕ ಎಂದು ವಿಧಾನಸಭೆ ಒಳಗೆ ಹೇಳಬೇಕಿತ್ತು. ಕಾಂಗ್ರೆಸ್, ವಿಪಕ್ಷವಾಗಲು ಕೆಲಸ ಮಾಡಲು ಪೀಠಿಕೆ ಹಾಕಿ ಹೊರಡುತ್ತಿದೆ ಎಂದು ಟೀಕಿಸಿದರು.
ವಿಪಕ್ಷವಾಗಿ ನಾವು ಹೋರಾಟ ಮಾಡುತ್ತಿದ್ದೇವೆ: ಕಾಂಗ್ರೆಸ್ ಆಡಳಿತ ಪಕ್ಷವಾಗಿ ಹಾರಾಟ ಮಾಡುತ್ತಿದೆ ಎಂದು ಆಕ್ಷೇಪಿಸಿದ ಅವರು, ಮಂತ್ರಿಗಳಿಗೆ ಇನ್ ಚಾರ್ಜ್ ಕೊಟ್ಟು ಸಭೆಗಳನ್ನು ಮಾಡಿ, ನಾವು ಬಿಜೆಪಿ ಭ್ರಷ್ಟಾಚಾರಗಳನ್ನು ಬಯಲಿಗೆ ತರುತ್ತೇವೆ. ಕೇಂದ್ರ ನೀಡುವ ಅನುದಾನದಲ್ಲಿ ತಾರತಮ್ಯ ಆಗಿದೆ. ಅದರ ಬಗ್ಗೆ ನಾವು ಸಮಾವೇಶ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ಸಿನವರು ನಾಟಕ ಆಡುತ್ತಿದ್ದಾರೆ ಎಂದು ದೂರಿದರು.
ಕೇಂದ್ರದ ಅನುದಾನ ಬಾರದಿದ್ದರೆ ಪ್ರಜಾಪ್ರಭುತ್ವದ ರೀತಿಯಲ್ಲಿ ಮಾತನಾಡಬೇಕಿತ್ತು. ನಮ್ಮ ರಾಜ್ಯದ ಸಂಸದರಾದ ಮಲ್ಲಿಕಾರ್ಜುನ ಖರ್ಗೆ ಜೀ ಅವರು ವಿಪಕ್ಷ ನಾಯಕರು. ಅವರು ತಾರತಮ್ಯ ಆಗಿದೆ ಎಂದು ಸಂಸತ್ತಿನಲ್ಲಿ ಒಂದು ದಿನವೂ ಮಾತನಾಡಿಲ್ಲ. ಇಲ್ಲಿ ರಾಜಕೀಯದ ಬೇಳೆ ಬೇಯಿಸಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಸ್ವತಃ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ಸಿನವರ ಮುಖಕ್ಕೆ ಮಂಗಳಾರತಿ ಎತ್ತಿ ಹೋಗಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ಸರ್ಕಾರ 10 ವರ್ಷ ಇತ್ತು. ಅದೇ ರೀತಿ ನರೇಂದ್ರ ಮೋದಿಯವರ ಸರ್ಕಾರ 10 ವರ್ಷ ಇತ್ತು. ಅಂಕಿ ಅಂಶಗಳೊಂದಿಗೆ ಹೋಲಿಸಿ ಅನುದಾನ, ಸಹಾಯದ ವಿವರ ನೀಡಿದ್ದಾರೆ. ಯಾವುದರಲ್ಲೂ ಕಡಿಮೆ ಮಾಡಿಲ್ಲ. ನಾನೇ ಹಿಂದೆ ಕಂದಾಯ ಸಚಿವನಾಗಿದ್ದೆ. ಡಾ. ಮನಮೋಹನ್ ಸಿಂಗ್ ಅವರ ಸರ್ಕಾರ ಕೊಟ್ಟ ಮೊತ್ತದಿಂದ 5 ಪಟ್ಟು ಜಾಸ್ತಿ ಮೋದಿಯವರ ಸರ್ಕಾರ ಕೊಟ್ಟಿದೆ ಎಂದು ತಿಳಿಸಿದರು.
ಪಾದಯಾತ್ರೆ ಅಂತಿಮ ಘಟ್ಟಕ್ಕೆ:ಪಾದಯಾತ್ರೆಯ ಅಂತಿಮ ಘಟ್ಟಕ್ಕೆ ತಲುಪಿದ್ದೇವೆ. ಇವತ್ತು ಸಂಜೆ ಮೈಸೂರು ಗಡಿಭಾಗ ತಲುಪಿ ನಾಳೆ ಬೆಳಿಗ್ಗೆ ಆರೇಳು ಕಿಮೀ ಪಾದಯಾತ್ರೆಯ ಬಳಿಕ ಮೈಸೂರಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಆರ್. ಅಶೋಕ್ ಅವರು ವಿವರಿಸಿದರು.ಜನರು ನಮ್ಮನ್ನು ವಿಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು, ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅವರ ಭ್ರಷ್ಟಾಚಾರ, ಅವ್ಯವಹಾರ, ಸ್ವಜನ ಪಕ್ಷಪಾತ- ಇವೆಲ್ಲವನ್ನೂ ತಿಳಿಸುವುದು, ಹೋರಾಟ ಮಾಡುವುದು ನಮ್ಮ ಹಕ್ಕು ಎಂದು ಪ್ರತಿಪಾದಿಸಿದರು.
ಕಾನೂನು ಪ್ರಕಾರ, ನಿಯಮ ಪ್ರಕಾರ ಸಿದ್ದರಾಮಯ್ಯನವರು ನಿವೇಶನ ಪಡೆದಿದ್ದರೆ 2014ರಲ್ಲಿ ಕಡತ ಬಂದಾಗ ಯಾಕೆ ತಿರಸ್ಕರಿಸಿದ್ದರು?- ಇದು ಬಿಜೆಪಿ ಪ್ರಶ್ನೆ ಎಂದರು. 10 ವರ್ಷ ಅದಕ್ಕಾಗಿ ಕಾಯಬೇಕಿತ್ತೇ ಎಂದು ಕೇಳಿದರು. ಅನ್ಯಾಯ ಇದ್ದ ಕಾರಣ ನೀವು ಆಗ ಸಹಿ ಹಾಕಿಲ್ಲ ಅಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಈ ಆಪಾದನೆಗೆ ಅವರಲ್ಲಿ ಉತ್ತರ ಇಲ್ಲ ಎಂದು ತಿಳಿಸಿದರು.
ಅಣ್ಣ ಡಿ.ಕೆ.ಶಿವಕುಮಾರಣ್ಣ, ಸಿದ್ರಾಮಣ್ಣ, ನೀವು ವಾಲ್ಮೀಕಿ ನಿಗಮದ ಹಗರಣ, ಮೂಡ ಹಗರಣ ಮಾಡಿದ್ದೀರಿ. 25 ಸಾವಿರ ಕೋಟಿ ಟಿಎಸ್‌ಪಿ ದಲಿತರ ಉದ್ಧಾರಕ್ಕೆ ಸೇರಬೇಕಾದ ಹಣವನ್ನು ಗ್ಯಾರಂಟಿ ಕೊಡಲು ಬಳಸಿದ್ದೀರಿ. ಇದಕ್ಕೆ ದಲಿತರ ಹಣವೇ ಇವರಿಗೆ ಬೇಕಾಗಿತ್ತು. ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರು ನಿಮ್ಮ ಕೈ ಕಟ್ಟಿ ಹಾಕಿದ್ದರು:ಬೇರೆ ಜಾತಿಗಳವರ ಹಣವನ್ನು ಇವರು ಮುಟ್ಟಿಲ್ಲ. ಯಾರೂ ಕೇಳೋರಿಲ್ಲ. ಹೇಳೋರಿಲ್ಲವೆಂದು ದಲಿತರದೇ ಹಣ ವರ್ಗಾವಣೆ ಮಾಡಿದ್ದಾರೆ. ಇದೆಲ್ಲ ವಿವರವನ್ನೂ ನಾವು ಬಿಡುಗಡೆ ಮಾಡಿದ್ದೇವೆ ಎಂದ ಅವರು, ಬೊಮ್ಮಾಯಿ, ನಮ್ಮ ಮೇಲೆ ಇದ್ದ ಆರೋಪಗಳ ದಾಖಲೆಗಳನ್ನು ಆಗ ಬಿಡುಗಡೆ ಮಾಡಬೇಕಿತ್ತು. ಯಾರು ನಿಮ್ಮ ಕೈ ಕಟ್ಟಿ ಹಾಕಿದ್ದರು ಎಂದು ಆರ್. ಅಶೋಕ್ ಅವರು ಪ್ರಶ್ನೆಯನ್ನು ಮುಂದಿಟ್ಟರು.ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ, ಬಿಜೆಪಿ ಮುಖಂಡ ಅಶೋಕ್ ಜಯರಾಮ್ ಮುಂತಾದವರು ಇದ್ದರು.
ಹಿಂದೂ ‘ಅಶ್ಲೀಲ’ ಪದ ಹೇಳಿಕೆ; ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್‌ ಸಮನ್ಸ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
