ಹಾಸನ:ಆಲೂರು ತಾಲೂಕಿನ ಕಾರ್ಜುವಳ್ಳಿಯ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(39) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಜುವಳ್ಳಿ ಹಿರೇಮಠದ ನಿವಾಸದಲ್ಲಿ ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಕೋಣೆಯತ್ತ ತೆರಳಿದ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ಶ್ರೀಗಳ ಮೃತದೇಹದ ಪಕ್ಕ ಡೆತ್​ನೋಟ್​ ಸಿಕ್ಕಿದೆ.
ಶ್ರೀಗಳು ಕಾರವಾರ ಮೂಲದವರು. ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ 2006ನೇ ಇಸವಿಯಿಂದ ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾಗಿದ್ದರು. 15 ಎಕರೆ ಪಾಳುಭೂಮಿಯಲ್ಲಿ ಮಠವನ್ನು ಅಭಿವೃದ್ಧಿ ಮಾಡಿದ್ದರು.
ಶ್ರೀಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿಗೆ ಕಾರಣ ನಿಗೂಢವಾಗಿದೆ. ಆದರೆ, ಮೃತದೇಹದ ಪಕ್ಕವೇ ಚೀಟಿಯೊಂದು ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂಬ ಬರಹ ಮತ್ತು ಸಹಿ ಕೂಡ ಇದೆ. ಶ್ರೀಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಠದ ಬಳಿ ಭಕ್ತವೃಂದ ಜಮಾಯಿಸಿದ್ದರು.
ಕಾರಜೋಳಗೆ ಅದೃಷ್ಟ ಚೆನ್ನಾಗಿದೆ, ಅವರು ಸಿಎಂ ಆದ್ರೆ ನಮ್ಮದೇನೂ ಅಭ್ಯಂತರವಿಲ್ಲ…

ರಾಜ್ಯದಲ್ಲಿ ಮತ್ತೆ 2 ದಿನ ಭಾರಿ ಮಳೆ: ಅಪ್ಪಳಿಸಲಿದೆ ನಿವಾರ್​ ಚಂಡಮಾರುತ

ಕಾಡು ಹಂದಿ ಬೇಟೆಗೆ ಹೋದವನ ದೇಹವೇ ಛಿದ್ರಛಿದ್ರ ಆಯ್ತು ! ವರಾಹನ ಶಾಪ ತಟ್ಟೀತೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
