ರಾಯಚೂರು:ಯುಗಾದಿ ಹಬ್ಬದ ಪ್ರಯುಕ್ತಬಿರು ಬಿಸಿಲಿನಲ್ಲಿ‌ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಬಳಿ ಘಟನೆ ನಡೆದಿದೆ.
ಮೃತ ಯುವಕನನ್ನು ಶ್ರೀಶೈಲ ದಡುತಿ (22) ಎಂದು ಗುರುತಿಸಲಾಗಿದ್ದು, ಈ ತ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮೂಲದವನು ಎಂದು ತಿಳಿದು ಬಂದಿದೆ. ಯುಗಾದಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ತಮ್ಮ ಸಂಗಡಿಗರ ಜೊತೆಗೂಡಿ ಶ್ರೀಶೈಲ ಪಾದಯಾತ್ರೆ ಹೊರಟಿದ್ದರು.
ಪಾದಯಾತ್ರೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮಕ್ಕೆ ತಲುಪಿತ್ತು. ಸುಸ್ತಾಗಿರೋ ಹಿನ್ನೆಲೆ ದಾರಿ ಮಧ್ಯೆ ವಿಶ್ರಾಂತಿಗೆಂದು ಶ್ರೀಶೈಲ ಕುಳಿತಿದ್ದರು. ಬಿಸಿಲಿನ ತಾಪಕ್ಕೆ ದಣಿದಿದ್ದು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ಆತ ಸ್ಥಳದಲ್ಲೇ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
