ಬೆಂಗಳೂರು: ಸ್ಯಾಂಡಲ್​​ವುಡ್​ ನಟಿ ಶ್ರುತಿ ಶ್ರೀ ಮಂಜುನಾಥ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಈ ವೇಳೆ ರಕ್ಷಾ ಬಂಧನದ ನಿಮಿತ್ತ ಶ್ರೀ ಕ್ಷೇತ್ರ ಧರ್ಮಾಧಿಕಾರಿಯಾಗಿರುವ ವಿರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ನಿನ್ನೆ ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ್ ನಿಮ್ಮೆಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಇನ್​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.
A post shared by Shruthi (@shruthi__krishnaa)

ಶೃತಿ ಅವರು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಂಜುನಾಥನ ದರ್ನ ಪಡೆದುಕೊಂಡು ಅದರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನೂ ಸಹ ಭೇಟಿಯಾಗಿದ್ದಾರೆ.ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟಿ ಶ್ರುತಿ ವೀರೇಂದ್ರ ಹೆಗ್ಗಡೆಯವರ ಕೈಗೆ ರಾಖಿ ಕಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶೇಷವಾಗಿ ರಕ್ಷಾಬಂಧನವನ್ನ ಆಚರಿಸಿದ್ದಾರೆ.

ಸದ್ಯ ನಟಿ ಶ್ರುತಿ ಅವರು ಗಿಚ್ಚಿ ಗಿಲಿಗಿಲಿ  ಜಡ್ಜ್ ಆಗಿ ಕನ್ನಡ ಕಿರುತೆರೆಯಲ್ಲಿ ಮನೆ ಮಾತಾಗಿದ್ದಾರೆ. ಕೆಲವು ಸಿನಿಮಾಗಳಲ್ಲಿಯೂ ಶ್ರುತಿ ತೊಡಗಿಕೊಂಡಿದ್ದಾರೆ.
ನಾಗ ಚೈತನ್ಯ-ಶೋಭಿತಾ ಮದ್ವೆ! ಸಂಚಲನದ ಭವಿಷ್ಯ ನುಡಿದ ಮತ್ತೊಬ್ಬ ಜ್ಯೋತಿಷಿ

‘ಅಣ್ಣಾವ್ರು’ ಚಿತ್ರದಲ್ಲಿ ದರ್ಶನ್​ಗೆ ಜೋಡಿಯಾಗಿದ್ದ ನಟಿ ಹೇಗಾಗಿದ್ದಾರೆ ಗೊತ್ತಾ? ಇತ್ತೀಚಿನ ಫೋಟೋ ನೋಡಿದ್ರೆ ನೀವು ಬೆರಗಾಗುತ್ತೀರಿ..

ಬೇಬಿ ಬಂಪ್ ಫೋಟೋಶೂಟ್​​ನಲ್ಲಿ ಹರ್ಷಿಕಾ ಮಿಂಚು! ತಾಯ್ತನದ ಕಳೆ ಹೆಚ್ಚಿಸಿದ ರವಿವರ್ಮನ ಪೇಂಟಿಂಗ್ ಥೀಮ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
