ಮೈಸೂರು:ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆಗೆ ಜುಲೈ 1ರಂದು ಮೈಸೂರಿನಲ್ಲಿ, ಕಲಬುರಗಿಯಲ್ಲಿ ಗೃಹಜ್ಯೋತಿಗೆ ಚಾಲನೆ ಕೊಡಲಾಗುವುದು. ಜುಲೈ 16ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಹೆಲಿಪ್ಯಾಡ್‌ನಲ್ಲಿ ಈ ಕುರಿತು ಮಾತನಾಡಿದ ಸಿಎಂ ಜೂನ್​ 11ರಂದು ವಿಧಾನಸೌಧ ಮುಂಭಾಗ ಸ್ತ್ರೀ ಶಕ್ತಿ ಯೋಜನೆಗೆ ಚಾಲನೆ ಕೊಡಲಾಗುವುದು. ನಾಳ ಮಧ್ಯಾಹ್ನ 1 ಘಂಟೆ ನಂತರ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿರುತ್ತದೆ ಎಂದು ಹೇಳಿದ್ಧಾರೆ.
ರಾಜ್ಯದ ಎಲ್ಲಾ ಮಹಿಳೆಯರಿಗೆ ವೋಲ್ವೊ, ಎಸಿ, ಸ್ಲೀಪರ್​, ರಾಜಹಂಸ ಹೊರತುಪಡಿಸಿ ಬೇರೆ ಎಲ್ಲಾ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಹೊರರಾಜ್ಯಕ್ಕೆ ಪ್ರಯಾಣಿಸುವವರು ರಾಜ್ಯದ ಗಡಿ ಭಾಗದವರೆಗೂ ಉಚಿತವಾಗಿ ಪ್ರಯಾಣಿಸಿ ಆ ನಂತರ ಟಿಕೆಟ್​ ಪಡೆದುಕೊಳ್ಳಬೇಕು ಎಂದು ಸ್ತ್ರೀ ಶಕ್ತಿ ಯೋಜನೆ ಕುರಿತು ಮಾಹಿತಿ ನೀಡಿದ್ಧಾರೆ.
ಇದನ್ನೂ ಓದಿ:ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಟಾಂಗ್​
ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ, ವಿದ್ಯುತ್​ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸರ್ಕಾರದ ತಲೆನೋವು ನಿಮಗ್ಯಾಕೆ ನಾವು ಹೇಳಿದಂತೆ ಯೋಜನೆ ಜಾರಿ ಮಾಡುತ್ತೇವೆ. ವಿದ್ಯುತ್ ದರವನ್ನ ಪ್ರತಿ ವರ್ಷ ರೆಗ್ಯುಲೇಟರಿ ಕಮಿಷನ್ ದರ ಪರಿಷ್ಕರಣೆ ಮಾಡುತ್ತೆ. ಜೂನ್ 1 ರಿಂದ ಜಾರಿ ಮಾಡುತ್ತಾರೆ.
ನಾವು ಅಧಿಕಾರಕ್ಕೆ ಬರುವ ಮುಂಚಿತವಾಗಿ ವಿದ್ಯುತ್ ದರ ಪರಿಷ್ಕರಣೆ ಆಗಿದೆ. ಚುನಾವಣೆ ನೀತಿ ಸಂಹಿತೆಯಿಂದ ತಡೆ ಆಗಿತ್ತು. ಜೂನ್ ತಿಂಗಳಿಂದ ಅದು ಜಾರಿ‌ ಆಗಿದೆ. ವಿರೋಧ ಪಕ್ಷಗಳು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:16 + ten =
Remember me
