ಬೆಂಗಳೂರು:ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್​ ಹೈಕಮಾಂಡ್​ಗೆ ಕಗ್ಗಂಟಾಗಿ ಹೋಗಿದ್ದು, ದೆಹಲಿಯಲ್ಲಿ ಇನ್ನೇನು ಇದರ ಬಗ್ಗೆ ಮತ್ತೊಂದು ಸುತ್ತಿನ ಬಿರುಸಿನ ಚರ್ಚೆ ಆಗಲಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ತಲುಪಿ ಸಜ್ಜಾಗಿದ್ದರೆ, ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಆಗಿರುವ ಡಿ.ಕೆ.ಶಿವಕುಮಾರ್ ಇನ್ನೇನು ದೆಹಲಿಗೆ ಹೊರಡಲಿದ್ದಾರೆ.
ಮಾಜಿ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ತಲುಪಿದ್ದು, ಅಲ್ಲಿನ ಖಾಸಗಿ ಹೋಟೆಲೊಂದರಲ್ಲಿ ತಮ್ಮ ಆಪ್ತರ ಜತೆ ಗಹನವಾದ ಚರ್ಚೆಯಲ್ಲಿದ್ದಾರೆ. ಅವರೊಂದಿಗೆ ಶಾಸಕರಾದ ಜಮೀರ್ ಅಹಮದ್​ ಖಾನ್​, ಎಂ.ಬಿ.ಪಾಟೀಲ್, ಪುತ್ರ ಯತೀಂದ್ರ, ಜಾಜ್೯, ಭೈರತಿ ಸುರೇಶ್ ಮುಂತಾದವರಿದ್ದಾರೆ.
ಇದನ್ನೂ ಓದಿ:ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ
ಇತ್ತ ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್​ ಇನ್ನೇನು ದೆಹಲಿಗೆ ಹೊರಡಲಿದ್ದು, ಆ ಕುರಿತ ತಯಾರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕರು, ಅಭಿಮಾನಿಗಳೂ ಕಾಯುತ್ತಿದ್ದು, ಡಿಕೆಶಿ ಭದ್ರತೆಗಾಗಿ ಪೊಲೀಸರು ಕೂಡ ಸಜ್ಜಾಗಿದ್ದಾರೆ. ದೆಹಲಿಗೆ ತೆರಳಲಿರುವ ಡಿ.ಕೆ.ಶಿವಕುಮಾರ್​ಗೆ ಶುಭ ಕೋರಲು ಶಾಸಕ ಬೇಳೂರು ಗೋಪಾಲಕೃಷ್ಣ ವಿಮಾನನಿಲ್ದಾಣಕ್ಕೆ ಆಗಮಿಸಿದ್ದಾರೆ.
ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ, ಅವರೇನು ನಿರ್ಧರಿಸುತ್ತಾರೋ ನೋಡೋಣ: ಡಿ.ಕೆ.ಶಿವಕುಮಾರ್

ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್​ಗೆ ಮಾಜಿ ಸಚಿವ ನಿರಾಣಿ ಸವಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − seven =
Remember me
