ಬೆಂಗಳೂರು:ಬಿಜೆಪಿ ಕಾರ್ಯಕರ್ತ ಹಾಗೂ ಉದ್ಯಮಿ ಪ್ರದೀಪ್ ನಿವಾಸಕ್ಕೆ ಸುರ್ಜೆವಾಲ ಹಾಗೂ ಸಿದ್ದರಾಮಯ್ಯ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭ ಇಬ್ಬರೂ ನಾಯಕರು ಹೇಳಿಕೆ ನೀಡಿದ್ದು ಬಿಜೆಪಿ ವಿರುದ್ಧ ಹೊಸ ಅಸ್ತ್ರ ಎತ್ತಿಕೊಂಡಿದ್ದಾರಾ ಎಂಬ ಅನುಮಾನ ಶುರುವಾಗಿದೆ.
ಭೇಟಿ ಸಂದರ್ಭ ಮಾತನಾಡಿದ ಸುರ್ಜೆವಾಲಾ ‘ಸಿದ್ದರಾಮಯ್ಯ ಹಾಗೂ ರಾಮಲಿಂಗ ರೆಡ್ಡಿ ಜೊತೆಗೆ ಭೇಟಿ ನೀಡಿದ್ದೇವೆ. ಪ್ರದೀಪ್ ಕುಟುಂಬಕ್ಕೆ ಭರಿಸಲಾಗದ ನಷ್ಟಾಗಿದ್ದು ಬಹಳ ದುಃಖಿತರಾಗಿದ್ದಾರೆ. ದುರಂತ ಅಂತ್ಯವಾಗಿರುವ ಪ್ರದೀಪ್ ಕುಟುಂಬದೊಂದಿಗೆ ದುಃಖ ಹಂಚಿಕೊಳ್ಳಲು ಬಂದಿದ್ದೇವೆ. ಪ್ರದೀಪ್ ಅತಿರೇಕದ ನಿರ್ಧಾರ ತೆಗೆದುಕೊಂಡಿದ್ದಾರೆ.
ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ. ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳು. ೪೦% ಕಮಿಷನ್​ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ. ಸಂತೋಷ್ ಪಾಟೀಲ್ ಕೂಡ ಬಿಜೆಪಿ ಲೀಡರ್ ಆಗಿದ್ದ. ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. ಪ್ರಸಾದ್ ಸಾವಿಗೂ ಹಣಕಾಸಿನ ಸಮಸ್ಯೆಯೇ ಕಾರಣವಾಗಿತ್ತು
ಪ್ರದೀಪ್ ಕೊಲೆಗೆ ಕಾರಣ ಆದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು.‌ ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಅವರಿಗೆ ಶಿಕ್ಷೆ ಆಗಬೇಕು.‌ಅವರನ್ನು ಬಂಧಿಸಬೇಕು ಕಂಬಿ ಹಿಂದೆ ಕಳಿಸಬೇಕು’ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ‘ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿಯವರು ಪ್ರದೀಪ್​ಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ದೆವು. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಅನ್ನೋದು ಇವರ ವಾದ.
ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್​ಗೆ ಪ್ರಯತ್ನ ಮಾಡಿದ್ದಾರೆ. ಡೆತ್​ನೋಟ್ ನಲ್ಲಿ 6 ಜನರ ಹೆಸರು ಇದ್ದು ಅದರಲ್ಲಿ ಲಿಂಬಾವಳಿ ಹೆಸರು ಕೂಡ ಇದೆ. ಈಗಾಗಲೇ FIR ಆಗಿದೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲ‌ರನ್ನು ಅರೆಸ್ಟ್ ಮಾಡಬೇಕು.
ಸಾವಿಗೆ ಕಾರಣವಾದವರ ಮೇಲೆ ಕಾನೂನು ಕ್ರಮ ಆಗಬೇಕು. ಶಿಕ್ಷೆ ಆಗುವಂತೆ ಮಾಡಬೇಕು. ಶಾಸಕ ಇರಲಿ ಯಾರೇ ಇರಲಿ. ತಪ್ಪು ಯಾರೇ ಮಾಡಿದ್ರು ತಪ್ಪು. ಕಾನೂನು ಪ್ರಕಾರ ಕ್ರಮ ಆಗಬೇಕು. ಶಾಸಕರನ್ನು ಅರೆಸ್ಟ್ ಮಾಡಬೇಕು. ಇಲ್ಲದೆ ಹೋದ್ರೆ ಸಾಕ್ಷಿ ನಾಶ ಮಾಡಬಹುದು.
ಪೊಲೀಸರು ಅವರ ಮನೆಯವರ ಮೊಬೈಲ್ ಕೇಳ್ತಿದ್ದಾರೆ ಅಂತೆ. ಹೀಗೆಲ್ಲ ಮಾಡೋದು ಸರಿಯಲ್ಲ. ಗುತ್ತಿಗೆದಾರ ಸಂತೋಷ್ ‌ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪ ಕಾರಣ ಅಂತ ಹೇಳಿದ್ರು.‌3 ತಿಂಗಳಲ್ಲಿ ಬಿ ರಿಪೋರ್ಟ್ ಕೊಟ್ರು. ಇದೇ ಪರಿಸ್ಥಿತಿ ಈ ಕೇಸ್​ನಲ್ಲಿ ಆಗಬಾರದು. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಸರಕಾರದಲ್ಲಿ ಅನೇಕ ಜನ ಸಾಯೋದು, ದಯಾ ಮರಣ ಕೋರೋದು ಆಗ್ತಿದೆ.‌ ಇದಕ್ಕೆ ಭ್ರಷ್ಟಾಚಾರ ಕಾರಣ. ಭ್ರಷ್ಟಾಚಾರದ ವಿರುದ್ದ ಕ್ರಮ ಆಗದೆ ಇರೋದಕ್ಕೆ ಹೀಗೆ ಅಗ್ತಿದೆ. ಈ ಕೇಸ್ ನಲ್ಲಿ ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂದು ಹೇಳಿದ್ದಾರೆ.
ಈಗ ಉದ್ಯಮಿ ಪ್ರದೀಪ್​ ಸಾವಿನಿಂದಾಗಿ ರಾಜಕೀಯ ತಲ್ಲಣ ಸೃಷ್ಟಿಯಾಗಿದ್ದು ಸಿಗುತ್ತಿರುವ ಪ್ರತಿಯೊಂದು ಅವಕಾಶವನ್ನೂ ಬಳಸಿಕೊಳ್ಳಲು ಕಾಂಗ್ರೆಸ್​ ಮುಂದಾಗಿದೆ.
Sign in to your account
Please enter an answer in digits:seven + fifteen =
Remember me
