ಮೈಸೂರು: ಫ್ರಾನ್ಸ್ ಮತ್ತಿತರ ದೇಶಗಳಲ್ಲಿ ಶಾಲೆ ತೆರೆದ ನಂತರ ಮಕ್ಕಳಿಗೆ ಕರೊನಾ ಕಾಣಿಸಿಕೊಂಡಿದೆ. ಆದ್ದರಿಂದ ನಮ್ಮ ರಾಜ್ಯದಲ್ಲಿಯೂ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮೂರು ತಿಂಗಳವರೆಗೆ ಶಾಲೆ ತೆರೆಯದೆ ಇರುವುದು ಉತ್ತಮ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಮೂರು ತಿಂಗಳು ಕಳೆದ ನಂತರ ಸಾಧ್ಯವಾದರೆ ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲಿ. ಮಕ್ಕಳಿಗೆ ಕರೊನಾ ಕಾಣಿಸಿಕೊಂಡರೆ ಮನೆಯಲ್ಲಿ ಎಲ್ಲರಿಗೂ ಸೋಂಕು ಹರಡುತ್ತದೆ. ಹೀಗಾಗಿ ಸರ್ಕಾರ ಶಾಲೆ ತೆರೆಯಲು ಬೇಕಿದ್ದಲ್ಲಿ ಪೂರ್ವಸಿದ್ಧತೆ ಮಾಡಿಕೊಳ್ಳಲಿ. ಆದರೆ, ಯಾವುದೇ ಕಾರಣಕ್ಕೂ ಮುಂದಿನ ಮೂರು ತಿಂಗಳವರೆಗೆ ಶಾಲೆ ತೆರೆಯುವುದು ಸೂಕ್ತ ಅಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.
ಇದನ್ನೂ ಓದಿಖರ್ಗೆಗೆ ರಾಜ್ಯಸಭೆ ಟಿಕೆಟ್ ಕೊಡುವಂತೆ ಹೈಕಮಾಂಡ್‌ಗೆ ನಾನೇ ಶಿಫಾರಸು ಮಾಡಿದ್ದೆ: ಸಿದ್ದರಾಮಯ್ಯ
ಶಾಲೆ ತೆರೆಯಲು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆತುರ ತೋರುತ್ತಿವೆ. ಖಾಸಗಿ ಶಾಲೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ಪಾಲಕರಿಂದ ಶುಲ್ಕ ವಸೂಲಾತಿಗೆ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.
ಅದೇ ರೀತಿ ಆನ್‌ಲೈನ್ ಶಿಕ್ಷಣ ನಡೆಸಲು ಕೂಡ ಯಾವುದೇ ಶಾಲೆಗೆ ಅವಕಾಶ ಮಾಡಿಕೊಡಬಾರದು. ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಇದೆ. ಆನ್‌ಲೈನ್ ಶಿಕ್ಷಣವನ್ನು ನಡೆಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಇದನ್ನೂ ಓದಿಕೆಪಿಸಿಸಿ ಅಧ್ಯಕ್ಷರ ವಿರುದ್ಧ ಸಿದ್ದರಾಮಯ್ಯ ಆಪ್ತರ ಬೇಸರ; ಕಾಂಗ್ರೆಸ್​​ನಲ್ಲೂ ಅಸಮಾಧಾನದ ಹೊಗೆ
VIDEO: ಸಿದ್ದರಾಮಯ್ಯನವರಿಗೆ ಕುಡುಕನ ಕಾಟ; ಹಿಂದೆ ಕುಳಿತು ‘ಹೇ..ಸಿದ್ದರಾಮಯ್ಯ’ ಎಂದು ಒಂದೇ ಸಮನೆ ಕೂಗುತ್ತಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
