ದಾವಣಗೆರೆ:ನಾನು ದಾರಿದ್ರ್ಯ ಸರ್ಕಾರ ಎಂದು ಕರೆದಿದ್ದಕ್ಕೆ ಬಜೆಟ್ ಮೂಲಕ ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದರು. ಈಗ ಎಲ್ಲಿದೆ ಉತ್ತರ ಮಿಸ್ಟರ್ ಯಡಿಯೂರಪ್ಪ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕಕ್ಕೆ 2500 ಕೋಟಿ ರೂ. ಕೇಳಿದ್ದರು. ಸರ್ಕಾರ ನೀಡಿದ್ದು 1500 ಕೋಟಿ ರೂ. ಮಾತ್ರ. ಬಜೆಟ್ ಮಂಡನೆ ಮರುದಿನ ನೀರಾವರಿಗೆ ಹತ್ತು ಸಾವಿರ ಕೋಟಿ ರೂ. ಪ್ರಕಟಿಸಿದ್ದಾರೆ. ಅದು ಹೇಗೆ ಸಾಧ್ಯ? ಇದರಿಂದ ಬಜೆಟ್ ತನ್ನ ಪಾವಿತ್ರ್ಯತೆ ಕಳೆದುಕೊಳ್ಳುತ್ತದೆ ಎಂದರು.
ಶಾದಿಭಾಗ್ಯ ರದ್ದಿಗೆ ಆಕ್ರೋಶಬಿಜೆಪಿಯವರಿಗೆ ಸಂವಿಧಾನದಲ್ಲಿ‌ ನಂಬಿಕೆ ಇಲ್ಲ. ಅಲ್ಪಸಂಖ್ಯಾತರು ಮತ್ತು ದಲಿತರ ವಿರೋಧಿಗಳು. ಇದೇ ಕಾರಣಕ್ಕೆ ಶಾದಿ ಭಾಗ್ಯ ರದ್ದು‌ ಮಾಡಲಾಗಿದೆ. ರಾಜ್ಯದಲ್ಲಿ ದಲಿತರಿಗೆ ನೀಡಿದ ಹಣದಲ್ಲಿ ಕಡಿತವಾಗಿದೆ ಎಂದು ಆರೋಪಿಸಿದರು.
ರಾಷ್ಟವಿರೋಧಿ ಅಲ್ಲಬೀದರ್ ಶಾಹೀನ್ ಶಾಲೆಯಲ್ಲಿ ನಡೆದ ನಾಟಕ ಪ್ರದರ್ಶನ ರಾಷ್ಟ್ರವಿರೋಧಿಯಲ್ಲ. ಅದು ಐಪಿಸಿ 124ಎ ಅಡಿಯಲ್ಲಿ ಇರಲ್ಲ. ಇದನ್ನು ನ್ಯಾಯಾಲಯವೇ ಹೇಳಿದೆ. ಆದರೂ ಅವರನ್ನು ಜೈಲಿಗೆ ತಳ್ಳಿದ್ದು ತಪ್ಪು.
ಪ್ರತ್ಯೇಕ ರಾಜ್ಯ ತಪ್ಪುಶಾಸಕ ಉಮೇಶ ಕತ್ತಿ ಬೇಕಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಕೊಳ್ಳಲಿ. ಆದರೆ, ಪ್ರತ್ಯೇಕ ರಾಜ್ಯದ ಬೇಡಿಕೆ ಸೂಕ್ತವಲ್ಲ. ಉತ್ತರ ಕರ್ನಾಟಕದ ಸಲುವಾಗಿ ವಿಧಾನಸಭೆ ಒಳ-ಹೊರಗೆ ಹೋರಾಟ ಮಾಡಲಿ. ಅದು ಬಿಟ್ಟು ಪ್ರತ್ಯೇಕ ರಾಜ್ಯ ಬೇಡಿಕೆ ಸರಿಯಲ್ಲ ಎಂದರು.
ಬೇಡ ಜಂಗಮ ಮೀಸಲಾತಿ ಬೇಡಜಂಗಮರನ್ನು ಪೂಜ್ಯರು ಎಂದು ಕರೆಯುತ್ತಾರೆ. ಬೇಡ ಜಂಗಮಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಪಿಸಿಸಿ ಕಥೆಕೆಪಿಸಿಸಿ ಅಧ್ಯಕ್ಷ ನೇಮಕ ವಿಚಾರ ವಿಳಂಬವಾಗಿದೆ. ಪಕ್ಷದ ವರಿಷ್ಠರು‌ ಏನು ಮಾಡುತ್ತಾರೆ ಕಾದು ನೋಡಬೇಕಿದೆ. ಈ ವಿಚಾರದಲ್ಲಿ ತಾವು ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.
ಕತ್ತೆ ಕಿವಿಯಲ್ಲಿ ಸಿದ್ದರಾಮಯ್ಯ ಏನೋ ಊದಿದ್ರು.: ಹೀಗೊಂದು ಕಥೆ ಹೇಳಿದ್ರು ನಳಿನ್ ಕುಮಾರ್ ಕಟೀಲು

ಜಾತ್ಯತೀತ ಜನತಾದಳದಲ್ಲಿ ರಾಜೀನಾಮೆ ಪರ್ವ?; ರಮೇಶ್ ಬಾಬು ರಾಜೀನಾಮೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
