ಬೆಂಗಳೂರು:ಕೋಲಾರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್ ಶಾಸಕರು ತ್ಯಾಗ ಮಾಡಿಲ್ಲ, ಅದನ್ನು ಮಾರಾಟ ಮಾಡಿದ್ದಾರೆ, ಸಿದ್ದರಾಮಯ್ಯ ಅದನ್ನು ಕೊಂಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.
ಶ್ರೀನಿವಾಸ ಗೌಡರು ಮಾತನಾಡಿದ ತಾನೇಕೆ ಸೀಟು ತ್ಯಾಗ ಮಾಡಿದ್ದೆಂದು ತಿಳಿಸುವ ಆಡಿಯೋವನ್ನು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಬಿಡುಗಡೆ ಮಾಡಿ, ಇದಕ್ಕೆ ಸಿದ್ದರಾಮಯ್ಯ ಉತ್ತರ ಕೊಡಬೇಕೆಂದು ಆಗ್ರಹಿಸಿದರು.
17.5 ಕೋಟಿ ರೂಪಾಯಿ ಸಾಲ ತೀರಿಸುವುದಾಗಿ ಹೇಳಿದ್ದಕ್ಕೆ ಸೀಟು ಬಿಟ್ಟುಕೊಟಿರುವುದು, ಎಂಎಲ್ಸಿ ಮಾಡಿ ಸಚಿವರನ್ನಾಗಿ ಮಾಡುವ ಭರವಸೆ ಕೊಟ್ಟ ವಿವರ ಆಡಿಯೋದಲ್ಲಿದೆ. ಸಾಲವನ್ನು ಹೇಗೆ ತೀರಿಸುತ್ತಾರೆಂದು ಹೇಳಲಿ ಎಂದು ಸವಾಲು ಹಾಕಿದರು.
ಸಿದ್ದರಾಮಯ್ಯ ಅವರು ಅಲೆಮಾರಿ. ಎಲ್ಲಿಯೂ ನಿಜ ಹೇಳದ, ಅಭಿವೃದ್ಧಿ ಮಾಡದ ವ್ಯಕ್ತಿ. ವರುಣಾ ಇತ್ತು. ಚಾಮುಂಡೇಶ್ವರಿಗೆ ಬಂದರು, ಅಲ್ಲಿನ ಜನ 30 ಸಾವಿರ ಮತಗಳಿಂದ ಸೋಲಿಸಿ ಕಳುಹಿಸಿದರು. ಅಲ್ಲಿಂದ ಬಾದಾಮಿಗೆ ಬಂದರು. ಅಲ್ಲಿಂದ ಕೋಲಾರಕ್ಕೆ ಬಂದಿದ್ದಾರೆ. ಇದೀಗ ಕೊನೆ ಚುನಾವಣೆ ಎನ್ನುತ್ತ ಶ್ರೀನಿವಾಸ ಗೌಡರು ನನಗಾಗಿ ಸೀಟು ತ್ಯಾಗ ಮಾಡಿದ್ದಾಗಿ ಹೇಳಿದ್ದಾರೆ. ಯಾಕೆ ತ್ಯಾಗ ಮಾಡಿದ್ದಾರೆ. ಲಾಭ ಇಲ್ಲದೇ ತ್ಯಾಗ ಮಾಡಿದರೇ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − sixteen =
Remember me
