ಮಂಗಳೂರು:ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರೆ ಬಿಜೆಪಿ ಸೇರಿದ 17 ಶಾಸಕರದ್ದು ನಾಯಿಪಾಡು ಎಂದು ಹೇಳಿಕೆ ಕೊಟ್ಟ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರು ಕಟುವಾಗಿ ತಿರುಗೇಟು ನೀಡಿದ್ದಾರೆ.
ಸದ್ಯ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡಾಗಿದೆ. ಅವರು ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ ಎಂದು ನಳಿನ್​ಕುಮಾರ್ ಕಟೀಲ್​ ವ್ಯಂಗ್ಯವಾಡಿದರು.ದಿನನಿತ್ಯ ಪ್ರಚಾರ ಮಾಡಲು ಡಿ.ಕೆ.ಶಿವಕುಮಾರ್​ ಕೈ ಮೇಲಾಗುತ್ತಿದೆ. ಆ ಹತಾಶೆಯಿಂದ ಹೀಗೆಲ್ಲ ಮಾತನಾಡುತ್ತಿದ್ದಾರೆ. ಅವರೊಬ್ಬ ಮಾಜಿ ಮುಖ್ಯಮಂತ್ರಿ, ಅನುಭವ ಉಳ್ಳವರು ಹೀಗೆಲ್ಲ ಮಾತನಾಡುವುದು ಸರಿಯಲ್ಲ. ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ, ಮಾಧ್ಯಮಗಳಲ್ಲಿ ಸುದ್ದಿಯಲ್ಲಿರಲು ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.ಇದನ್ನೂ ಓದಿ:ಯುವರಾಜರಿಬ್ಬರಿಗೆ ಉತ್ತರ ಪ್ರದೇಶದಲ್ಲಿ ಏನಾಗಿತ್ತೋ ಬಿಹಾರದಲ್ಲೂ ಅದೇ ಮರುಕಳಿಸಲಿದೆ: ಪ್ರಧಾನಿ ಮೋದಿ
ಎರಡೂ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಗೆದ್ದ ನಂತರ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು ಎಂದು ನಳಿನ್​ ಕುಮಾರ್​ ಕುಮಾರ್​ ತಿಳಿಸಿದ್ದಾರೆ. ಹಾಗೇ ಪದೇಪದೆ ಸಿಎಂ ವಿರುದ್ಧ ಮಾತನಾಡುತ್ತಿರುವ ಯತ್ನಾಳ್​ ಅವರನ್ನು ಕರೆದು ಮಾತನಾಡಲಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿದ ಲಾರಿ ಡ್ರೈವರ್​ಗೆ ತಕ್ಕ ಪಾಠ ಕಲಿಸಿದ ಮಾಲೂರು ಜನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 11 =
Remember me
