ಮೈಸೂರು:ಏಪ್ರಿಲ್​ ತಿಂಗಳ ಬಳಿಕ ಬಿ.ಎಸ್​.ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುತ್ತಾರೆ. ನನಗೆ ಆರ್.ಎಸ್.ಎಸ್. ಮೂಲಗಳಿಂದ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಫೋಟಕ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಮುಂದುವರೆಯುತ್ತಾರೆ ಅಂತಾನೇ ಅಮಿತ್ ಷಾ ಅವರು ಹೇಳಬೇಕು. ಅದನ್ನು ಬಿಟ್ಟು ಸಿಎಂ ಸ್ಥಾನದಿಂದ ತೆಗೆಯುತ್ತೇನೆಂದು ಹೇಳೋಕಾಗುತ್ತಾ? ಯಾವುದೇ ಪಾರ್ಟಿಯ ಹೈಕಮಾಂಡ್ ಆದರೂ ತೆಗೆಯುತ್ತೇನೆಂದು ಬಹಿರಂಗವಾಗಿ ಹೇಳಲ್ಲ. ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ? ಕೆಲಸ ಮಾಡೋಕಾಗುತ್ತಾ? ಎಂದು ಪ್ರಶ್ನಿಸಿದರು.
ಇದನ್ನೂ ಓದಿರಿ:48 ಗಂಟೆಗಳಲ್ಲಿ 9 ಕಾಮುಕರಿಂದ 13 ಬಾರಿ ರೇಪ್​: ನರಕಯಾತನೆ ಬಿಚ್ಚಿಟ್ಟ 9ನೇ ತರಗತಿ ವಿದ್ಯಾರ್ಥಿನಿ!
ಅಮಿತ್​ ಷಾ ಅವರು ಆ ರೀತಿ ಹೇಳಬಹುದು. ಆದರೆ ನನಗಿರುವ ಮಾಹಿತಿಯೇ ಬೇರೆ. ನನಗೆ ಆರ್‌ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಆದ ಮೇಲೆ ತೆಗೆಯುತ್ತಾರೆ ಎನ್ನುವ ಮೂಲಕ ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಇದೇ ವೇಳೆ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಗ್ರಾ.ಪಂ. ಚುನಾವಣೆಯಲ್ಲಿ ನಮ್ಮ ಪಕ್ಷ ಮತ್ತು ಶರತ್ ಸೇರಿ ಚುನಾವಣೆ ನಡೆಸಿದ್ದರು. ಹೋಸಕೋಟೆ ಕ್ಷೇತ್ರದಲ್ಲಿ ಶೇ.70ರಷ್ಟು ಬೆಂಬಲಿತರು ಗೆದ್ದಿದ್ದಾರೆ. ಈ ಹಿನ್ನೆಲೆ ನನಗೆ ಧನ್ಯವಾದ ಹೇಳೋಕೆ ಬಂದಿದ್ದರು. ಶರತ್ ಬಚ್ಚೇಗೌಡ ಪಕ್ಷಕ್ಕೆ ಬರುವ ಬಗ್ಗೆ ಮಾತುಕತೆ ನಡಯುತ್ತಿದೆ. ಇನ್ನು 15 ದಿನದಲ್ಲಿ ತೀರ್ಮಾನವಾಗುತ್ತದೆ ಎಂದು ಹೇಳಿದರು.(ದಿಗ್ವಿಜಯ ನ್ಯೂಸ್​)
ಆಟೋ ಚಾಲಕನ ಕೊನೇ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪರಿಹಾರ ನೀಡಿದ ಮಾಜಿ ಸಿಎಂ ಎಚ್​ಡಿಕೆ

11 ಮಹಿಳೆಯರ ಸಾವಿಗೆ ಕಾರಣ ಅಶೋಕ್​ ಖೇಣಿ: ಅವರನ್ನು ಬಂಧಿಸಿ ಎಂದು ಸರ್ಕಾರಕ್ಕೆ ಆಗ್ರಹ

ಪೂರ್ಣಾವಧಿಗೆ ಬಿಎಸ್​ವೈ ಸಿಎಂ; ರಾಜ್ಯ ಸರ್ಕಾರಕ್ಕೆ ಅಮಿತ್ ಷಾ ಅಭಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 9 =
Remember me
