ಬೆಂಗಳೂರು:“ಮಾಜಿ ಮುಖ್ಯಮತ್ರಿ ಎಚ್​.ಡಿ ಕುಮಾರಸ್ವಾಮಿ ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಸುಳ್ಳು ಸುಳ್ಳು ಆರೋಪ ಮಾಡಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ ಉತ್ತರ ಕೊಡುತ್ತೇವೆ. ಸರ್ಕಾರ ಎಲ್ಲೂ ಓಡಿಹೋಗುವುದಿಲ್ಲ. ಎಚ್​ಡಿಕೆ ಯಾವಾಗ ಸತ್ಯ ಹೇಳಿದ್ದಾರೆ? ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು” ಎಂದು ಸಿಎಂ ಸಿದ್ದರಾಮಯ್ಯ ಎಚ್​ಡಿಕೆ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ರಾಷ್ಟ್ರೀಯ ಪತ್ರಿಕಾ ದಿನಾಚರಣೆ; ಪತ್ರಕರ್ತರು ವೃತ್ತಿ ಬದ್ಧತೆ ಕಾಪಾಡಿಕೊಳ್ಳಲು ಕರೆ
“ಎಚ್.ಡಿ ಕುಮಾರಸ್ವಾಮಿ ಅವರ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡುವಂತೆ ಸವಾಲು ಹಾಕಿದ್ದಾರೆ. ತನಿಖೆ ಮಾಡಬೇಕಾಗಿ ಬಂದರೆ ಮಾಡುತ್ತೇವೆ, ಅದರಲ್ಲಿ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು” ಎಂದರು.
“ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್​ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ಅನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್​ನ ಕುಮಾರಸ್ವಾಮಿ ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ” ಎಂದರು.
ಇದನ್ನೂ ಓದಿ:ಬೆಂಗಳೂರು ಹಬ್ಬಕ್ಕೆ ಸರ್ಕಾರದ ಸಹಕಾರ; ನಗರದ ಇತಿಹಾಸ, ಪರಂಪರೆ ಉಳಿಸಲು ಸಿಎಂ ಕರೆ
“ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು” ಎಂದು ಲೇವಡಿ ಮಾಡಿದರು.
ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು.…pic.twitter.com/pslBozRlxG
— Siddaramaiah (@siddaramaiah)November 17, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + eight =
Remember me
