ಬೆಂಗಳೂರು:ವಿಶ್ವ ವಿಖ್ಯಾತ ದಸರಾ ಉತ್ಸವವನ್ನು ಈ ಬಾರಿ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇಂದು (ಆ.29) ಘೋಷಣೆ ಮಾಡಿದರು.
ನಾಳೆ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಸರಾವನ್ನು ಹಂಸಲೇಖ ಉದ್ಘಾಟಿಸುತ್ತಾರೆ ಎಂದು ಸಿಎಂ ಘೋಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಜತೆಗಿನ ತಮ್ಮ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷಗಳು ನಮ್ಮನ್ನು ದೂರ ಮಾಡಲು ಎಷ್ಟೇ ಪ್ರಯತ್ನ ಮಾಡಿದರೂ ನಾವಿಬ್ಬರು ಇನ್ನಷ್ಟು ಹತ್ತಿರವಾಗುತ್ತಿದ್ದೇವೆ ಎಂದರು.
ಚಾಮುಂಡಿ ದೇವಿಗೆ ಸೀರೆ ಜತೆಗೆ ಕನಕಾಂಬರ, ಮಲ್ಲಿಗೆ ಹಾಗೂ ಗುಲಾಬಿ ಹೂವಿನ ಹಾರವನ್ನು ಸಲ್ಲಿಸಿದರು. ಬಾಳೆಹಣ್ಣು ಮತ್ತು ದಾಳಿಂಬೆ ಹಣ್ಣನ್ನೂ ಸಮರ್ಪಿಸಿದರು. ಗ್ಯಾರಂಟಿ ಕಾರ್ಡ್‌ ಜತೆಗೆ ಸಿಎಂ ಮತ್ತು ಡಿಸಿಎಂ ಕಟ್ಟಿಕೊಂಡಿದ್ದ ಹರಕೆಯನ್ನು ಇದೀಗ ತೀರಿಸಿದ್ದಾರೆ.
ಬಲ್ಗೇರಿಯಾದ ವಧುವಿನ ಮಾರುಕಟ್ಟೆ! ಹೆಣ್ಣು ಮಕ್ಕಳನ್ನು ಖರೀದಿಸಲು ಅವಕಾಶ, ಆದ್ರೆ ಷರತ್ತುಗಳು ಅನ್ವಯ

2 ತಿಂಗಳಲ್ಲಿ 9 ಬಾರಿ ಕಚ್ಚಿದ ಒಂದೇ ಹಾವು! ಮನೆ ಖಾಲಿ ಮಾಡಿದ್ರೂ ತಪ್ಪಿಲ್ಲ ಕಾಟ, ಬಾಲಕನ ಬಿಟ್ಟು ಯಾರಿಗೂ ಕಾಣಿಸಿಕೊಳ್ಳದ ಉರಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − seven =
Remember me
