ವಿಜಯನಗರ:ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್​ ಮೂಲಕ ಭಯಪಡುವ ಅಗತ್ಯ ಇಲ್ಲ ಎನ್ನುವುದನ್ನು ವಿವರಿಸಿದ್ದಾರೆ.
ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು.
ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ.
ಇದೀಗ ಸಿದ್ದರಾಮಯ್ಯ ಈ ಘಟನೆ ಬಗ್ಗೆ ಟ್ವೀಟ್​ ಮಾಡಿದ್ದು “ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ” ಎಂದು ಬರೆದುಕೊಂಡಿದ್ದಾರೆ.
ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.ಈಗ ಆರಾಮಾಗಿದ್ದೇನೆ.ಇದನ್ನು ಅತಿರಂಜಿತ ರೀತಿಯಲ್ಲಿ ವರದಿ‌ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.— Siddaramaiah (@siddaramaiah)April 29, 2023
ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.ಈಗ ಆರಾಮಾಗಿದ್ದೇನೆ.ಇದನ್ನು ಅತಿರಂಜಿತ ರೀತಿಯಲ್ಲಿ ವರದಿ‌ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
