ಬಾಗಲಕೋಟೆ:ಕರ್ನಾಟಕದ ಹಳ್ಳಿ ಹಳ್ಳಿಗೂ ಕರೊನಾ ಬಿಸಿ ಮುಟ್ಟಿದ್ದು, ಪ್ರತಿ ತಾಲೂಕಿನಲ್ಲೂ ನೂರಾರು ಪ್ರಕರಣಗಳು ಪತ್ತೆಯಾಗುವಂತಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರವಾದ ಬಾದಾಮಿಯಲ್ಲೂ ಸೋಂಕಿನ ಅಬ್ಬರ ಹೆಚ್ಚಿದೆ. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಾಲೂಕಿಗೆ ಮೂರು ಆ್ಯಂಬುಲೆನ್ಸ್​ ಕೊಡುಗೆ ನೀಡಿದ್ದಾರೆ.
ಆ್ಯಂಬುಲೆನ್ಸ್​ ಜತೆ 50 ಪಿಪಿಇ ಕಿಟ್ ಮತ್ತು 100 ಎನ್95 ಮಾಸ್ಕ್​ಗಳನ್ನು ಸಿದ್ದರಾಮಯ್ಯ ಬಾದಾಮಿಗೆ ಕಳುಹಿಸಿಕೊಟ್ಟಿದ್ದಾರೆ. ತಾಲೂಕಿನಲ್ಲಿರುವ ಸಿದ್ದರಾಮಯ್ಯ ಬೆಂಬಲಿಗರು ಅದನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಬಾದಾಮಿ ತಹಸೀಲ್ದಾರ್ ಸುಹಾಸ ಇಂಗಳೆ, ಟಿಎಚ್ ಒ ಡಾ.ಎಂ.ಬಿ.ಪಾಟೀಲ ಅವರಿಗೆ ಈ ಹಸ್ತಾಂತರ ಮಾಡಲಾಗಿದೆ.
ಕರೊನಾ ಎರಡನೇ ಅಲೆ ಆರಂಭವಾದಾಗಿನಿಂದ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರಕ್ಕೆ ತೆರಳಿಲ್ಲ. ಅವರು ಯಾವಾಗ ಬರುತ್ತಾರೆ ಎಂದು ಜನರು ಕಾಯುತ್ತಿರುವುದಾಗಿ ಹೇಳಲಾಗಿದೆ.
ಬಾದಾಮಿ ತಾಲೂಕಿನಲ್ಲಿ ಈವರೆಗೆ 1914 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲಿ 1036 ಸಕ್ರಿಯ ಪ್ರಕರಣಗಳಿವೆ. 901 ಸೋಂಕಿತರು ಹೋಮ್ ಕ್ವಾರಂಟೈನ್​ನಲ್ಲಿದ್ದ, 64 ಜನರು ಕೋವಿಡ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 698 ಜನರಿಗೆ ಸೋಂಕು ಪತ್ತೆಯಾಗಿದೆ ಎನ್ನುವ ಮಾಹಿತಿಯಿದೆ.
‘ಪ್ಲೀಸ್​ ನಮ್ಮನ್ನ ರಕ್ಷಿಸಿ..’ ಕಾಪು ಕಡಲ ತೀರದ ನಡುಗುಡ್ಡೆಯಲ್ಲಿ ಸಿಲುಕಿಕೊಂಡ ಕಾರ್ಮಿಕರ ಅಳಲಾಟ

ನರ್ಸ್​ ಕೆನ್ನೆಗೆ ಹೊಡೆದ ವೈರಲ್​ ವಿಡಿಯೋದಲ್ಲಿದ್ದ ಡಾಕ್ಟರ್​ ಶವ ಪತ್ತೆ! ಕುಟುಂಬದವರು ಹಾಗೆ ಮಾಡಿದ್ದಾದರೂ ಏಕೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × two =
Remember me
