ಬೆಂಗಳೂರು:2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ತಂದಿದ್ದ ಕೆಲವು ಯೋಜನೆಗಳನ್ನು ಕಾಂಗ್ರೆಸ್​​ ಸರ್ಕಾರ ಕೈ ಹಿಡುತ್ತಾ ಎನ್ನುವ ಪ್ರಶ್ನೆ ರಾಜ್ಯದ ಜನತೆಗೆ ಇತ್ತು. ಈ ಪ್ರಶ್ನೆಗೆ ಇಂದಿನ ಬಜೆಟ್​​ನಲ್ಲಿ ಉತ್ತರ ಸಿಕ್ಕಿದೆ.
ನಿರೀಕ್ಷೆಯಂತೆಯೇ ಸಿದ್ಧರಾಮಯ್ಯ ಸರ್ಕಾರ, ಬಿಜೆಪಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಹಲವು ಕಾರ್ಯಕ್ರಮಗಳನ್ನು ಹೊಸ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿಲ್ಲ. ವಿವೇಕ ಸಿರಿ, ಜಿಲ್ಲೆಗೊಂದು ಗೋಶಾಲೆ ಯೋಜೆನಯನ್ನು ಬಜೆಟ್‌ನಲ್ಲಿ ಕೈಬಿಡಲಾಗಿದೆ.
ಇದನ್ನೂ ಓದಿ:ಕೃಷಿ ಭಾಗ್ಯ ಯೋಜನೆ ವಿಸ್ತರಣೆ; 100 ಕೋಟಿ ರೂ. ಅನುದಾನ ಮೀಸಲು
ಗೋವುಗಳ ರಕ್ಷಣೆಗಾಗಿ ಬಿಜೆಪಿ ಸರ್ಕಾರ ಕಳೆದ ಬಾರಿ ಜಿಲ್ಲೆಗೊಂದು ಗೋಶಾಲೆ ಆರಂಭ ಮಾಡುವ ಯೋಜನೆ ರೂಪಿಸಿತ್ತು. ಆದರೆ, ಹಾಲಿ ಸರ್ಕಾರದಲ್ಲಿ ಈ ಯೋಜನೆ ಮುಂದುವರಿಸುವ ಪ್ರಸ್ತಾಪ ಮಾಡಲಾಗಿಲ್ಲ. ವಿದ್ಯಾಸಿರಿ ಹಾಗೂ ವಿವೇಕ ಯೋಜನೆಯಡಿ ನಿರ್ಮಾಣವಾಗಲಿರುವ ಶಾಲಾ ಕೊಠಡಿಗಳ ಯೋಜನೆಯನ್ನು ಪ್ರಸ್ತಾಪ ಮಾಡಲಾಗಿಲ್ಲ.
ಬೇಸರ ಹೊರಹಾಕಿದ ಸಿದ್ದರಾಮಯ್ಯ:ಬಜೆಟ್‌ ವೇಳೆ ಕೇಂದ್ರ ಸರ್ಕಾರ ಮೇಲೆ ಸಿದ್ಧರಾಮಯ್ಯ ಬೇಸರ ಹೊರಹಾಕಿದರು. 15ನೇ ಹಣಕಾಸು ಆಯೋಗದ ಶಿಫಾರಸ್ಸು ಇದ್ದರೂ ಹೆಚ್ಚು ಅನುದಾನ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರದ ಜಿಎಸ್‌ಟಿ ಅನುದಾನ 2022ರ ಜುಲೈನಿಂದ ಸ್ಥಗಿತವಾಗಿದೆ. ಇದರಿಂದ 2022-23ನೇ ಸಾಲಿನಲ್ಲಿ 26954 ಕೋಟಿ ರೂಪಾಯಿ ರಾಜ್ಯಕ್ಕೆ ನಷ್ಟವಾಗಿದೆ.
Karnataka Budget 2023: ಮೂರು ಇಲಾಖೆಗಳಿಂದ 1,62,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 1 =
Remember me
