ಬೆಂಗಳೂರು:ಕಲ್ಯಾಣ ರಾಜ್ಯದ ಕನಸನ್ನು ಸಾಕಾರಗೊಳಿಸುವ ಮಹದೋದ್ದೇಶ, ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ತೇರನ್ನು ಜತೆಜತೆಗೇ ಎಳೆಯುವ ಸಂಕಲ್ಪದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2023-24ನೇ ಸಾಲಿನ ‘ಪರಿಷ್ಕೃತ’ ಬಜೆಟ್ ಮಂಡಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್​ನಲ್ಲಿದ್ದ ಹಲವು ಯೋಜನೆ ಕೈಬಿಟ್ಟು, ಇಲಾಖೆಗಳ ಹಂಚಿಕೆ ಮರುಪರಿಷ್ಕರಿಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಿ, ತಮ್ಮ ಹಿಂದಿನ ಅವಧಿಯ ಯೋಜನೆಗಳಿಗೆ ಮರು ಜೀವ ನೀಡಲು ಗಮನ ಕೊಟ್ಟಿರುವುದು ಬಜೆಟ್​ನ ಪ್ರಮುಖಾಂಶವಾಗಿವೆ.
ಸಿದ್ದರಾಮಯ್ಯ ತಾವಂದುಕೊಂಡ ಉದ್ದೇಶ, ಬದ್ಧತೆಯನ್ನು ಸ್ಪಷ್ಟವಾಗಿ ಹೇಳಿಕೊಳ್ಳುತ್ತಲೇ, ಪ್ರತಿಪಕ್ಷಬಿಜೆಪಿಯ ಆಡಳಿತವನ್ನು ಪರಿಪರಿಯಾಗಿ ಟೀಕಿಸಲೂ ಬಜೆಟ್ ಭಾಷಣ ಬಳಕೆ ಮಾಡಿಕೊಂಡಿದ್ದು, ಇನ್ನೂ ಅವರೊಳಗೆ ‘ಪ್ರತಿಪಕ್ಷ’ ನಾಯಕನ ಛಾಯೆ ಇರುವುದು ಎದ್ದುಕಾಣಿಸಿತು. ಬಿಜೆಪಿ ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿಯನ್ನು ಯಾವ ರೀತಿಯಲ್ಲಿ ಹಾಳು ಮಾಡಿದೆ, ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಹೇಗೆ ಬಂದಿಲ್ಲ ಎಂಬುದನ್ನು ಬಜೆಟ್​ನಲ್ಲಿ ಎತ್ತಿ ತೋರಿಸಿದ್ದಾರೆ. ಆ ಮೂಲಕ ವಿಧಾನಮಂಡಲದ ಕಲಾಪದಲ್ಲಿ ದಾಖಲಾಗುವಂತೆ ಮಾಡಿದ್ದಾರೆ.
‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ನಾಡಿನ ಘನ ಪರಂಪರೆಯನ್ನು ಮುಂದುವರಿಸುವ ಪ್ರಯತ್ನದ ಹಾದಿಯಲ್ಲಿ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಹಂಬಲ ವ್ಯಕ್ತಮಾಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.
ದುಡಿಮೆಯ ಗೌರವ ಎತ್ತಿ ಹಿಡಿಯುವ ತುಡಿತ, ಎಲ್ಲರ ಒಳಿತಿಗೆ ದುಡಿಯುವ ಕನಸು, ಮುಕ್ತವಾತಾವರಣದಲ್ಲಿ ಬದುಕುವ ಭರವಸೆ, ಸಾಮಾಜಿಕ ನ್ಯಾಯ ಹಾಗೂ ಸಮತೆ, ಸಮಾನತೆಯ ಮೇಲಿನ ಹಕ್ಕಿನ ಪ್ರತಿಪಾದನೆಯು ಕನ್ನಡಿಗರ ಅಪೇಕ್ಷೆಗಳ ಅಭಿವ್ಯಕ್ತಿ, ಸಾಮಾಜಿಕ ಸಾಮರಸ್ಯ ಹೀಗೆ ಬಗೆಬಗೆಯ ಆಶಯವನ್ನು ಬಜೆಟ್ ಭಾಷಣದಲ್ಲಿ ಹಂತಹಂತವಾಗಿ ವ್ಯಕ್ತಮಾಡಿದ್ದಾರೆ. ದುರಾಡಳಿತ ಹಾಗೂ ಭ್ರಷ್ಟಾಚಾರ ಸಾರ್ವಜನಿಕರಿಗೆ ಎರವಾಗಿತ್ತು, ಈ ಕತ್ತಲು ಇದೀಗ ಅಂತ್ಯ ಕಂಡಿದೆ.
ರಾಜ್ಯದ ಮಹಾಜನತೆ ಈ ಬಾರಿ ನಮ್ಮನ್ನು ಗೆಲ್ಲಿಸಿದ್ದು, ಏಳು ಕೋಟಿ ಕನ್ನಡಿಗರ ಅಪಾರ ನಂಬಿಕೆಯನ್ನು ಎತ್ತಿಹಿಡಿಯಲು, ಉಜ್ವಲ ಭವಿಷ್ಯ ನಿರ್ವಿುಸಲು ನಮ್ಮ ಪ್ರಯತ್ನ ಎಂದು ಹೇಳಿಕೊಂಡಿರುವ ಸಿದ್ದರಾಮಯ್ಯ, ಕರ್ನಾಟಕಕ್ಕೆ ಸೀಮಿತವಾಗದೇ, ಅಂಧಕಾರದಲ್ಲಿರುವ ಇಂದಿನ ಭಾರತದಲ್ಲಿ ಲಕ್ಷಾಂತರ ಭಾರತೀಯರ ಕನಸುಗಳಿಗೆ ರೆಕ್ಕೆ ಮೂಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಶ್ರಮಿಸಲಿದೆ ಎಂದು ವಿಸõತ ಅರ್ಥ ಬರುವಂತೆ, ಅದರಲ್ಲೂ ಭವಿಷ್ಯದ ಅನ್ಯರಾಜ್ಯ ಮತ್ತು ಲೋಕಸಭೆ ಚುನಾವಣೆ ಗಮನದಲ್ಲಿಟ್ಟು ಹೇಳಿದಂತಿದೆ.
ನಮ್ಮ ಸರ್ಕಾರ ಬಡವರು, ದುರ್ಬಲ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಭೂ ರಹಿತ ಕೃಷಿ ಕಾರ್ವಿುಕರು ಮತ್ತು ಮಹಿಳೆಯರು ಸೇರಿ ಎಲ್ಲರಿಗೂ ಸಮಾನ ಅವಕಾಶ ಒದಗಿಸುವ ಮೂಲಕ ಎಲ್ಲರ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸಲು ಬದ್ಧ ಎಂದು ಹೇಳಿಕೊಂಡು ಬಂದಿದ್ದಷ್ಟೇ ಅಲ್ಲದೇ, ಬಜೆಟ್​ನಲ್ಲಿ ಆ ವರ್ಗದತ್ತ ಚಿತೆôಸಿದ್ದಾರೆ.
ಹಿಂದಿನ ಸರ್ಕಾರ ಗಣನೀಯವಾಗಿ ನೀಡಿರುವ ಕೊಡುಗೆಯಾದ ಭ್ರಷ್ಟ್ಟಾಚಾರವನ್ನು ಸಂಪೂರ್ಣವಾಗಿ ನಿಗ್ರಹಿಸಲು ನಮ್ಮ ಸರ್ಕಾರ ಶ್ರಮಿಸಲಿದೆ ಮತ್ತು ರಾಜ್ಯದ ಜನತೆಯನ್ನು ಸಂಕಷ್ಟಗಳ ಸುಳಿಯಿಂದ ಹೊರಗೆ ತರಲು, ಅವರ ಮೇಲಿನ ಹೊರೆಗಳನ್ನು ಇಳಿಸಲು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಅವುಗಳ ಅನುಷ್ಠಾನವೇ ನಮ್ಮ ಆದ್ಯತೆ ಎಂದು ಹೇಳಿಕೊಂಡಿದ್ದಾರೆ.
ಅಂತಿಮವಾಗಿ, ಈ ಆಯವ್ಯಯದಲ್ಲಿ ಘೋಷಿಸಿದ ಎಲ್ಲ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ನಾನು ಸಿದ್ಧನಾಗಿದ್ದೇನೆ ಎಂದು ಗತ್ತಿನಲ್ಲಿ ಹೇಳಿಕೊಂಡಿರುವ ಸಿದ್ದರಾಮಯ್ಯ, ಎಲ್ಲರ ಸಹಕಾರದಿಂದ ಗುರಿಮುಟ್ಟುವ ವಿಸ್ವಾಸ ವ್ಯಕ್ತಪಡಿಸಿದ್ದಾರೆ.


‘ಮೆದುಳು ತಿನ್ನುವ ಅಮೀಬಾ’ ಹತ್ತನೇ ತರಗತಿ ವಿದ್ಯಾರ್ಥಿಯ ಜೀವ ತೆಗೆಯಿತು!

ಒಂದು ವರ್ಷದ ಅಂತರ.. ಅದೇ ಜಾಗ.. ಒಂದೇ ಥರದಲ್ಲಿ ಸಂಬಂಧಿಕರಿಬ್ಬರ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
