ಮೈಸೂರು:ತಮ್ಮ ಪ್ರಯಾಣದ ವೇಳೆ ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಯಾಕಾಗಿ ಝೀರೋ ಟ್ರಾಫಿಕ್ ಮಾಡಿದ್ದೀರಾ? ಎಂದು ಮೈಸೂರು ಪೊಲೀಸ್ ಆಯುಕ್ತರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯತ್ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ ಪೊಲೀಸ್ ಆಯುಕ್ತರನ್ನು ಪ್ರಶ್ನಿಸಿ, ‘ನಿಮಗೆ ಗೊತ್ತಿದೆಯಾ, ನಾನು ಝೀರೋ ಟ್ರಾಫಿಕ್ ಮಾಡಬೇಡಿ ಎಂದು ಹೇಳಿದ್ದೇನೆ. DONT DO THAT’ ಎಂದು ಹೇಳುತ್ತಾ ಖಡಕ್ ವಾರ್ನಿಂಗ್ ನೀಡಿದ ಘಟನೆ ಜಿ.ಪಂ ಆವರಣದಲ್ಲಿ ನಡೆದಿದೆ.
ಇದನ್ನೂ ಓದಿ:ಕೇರಳದಿಂದ ಕಾಲ್ನಡಿಗೆಯಲ್ಲೇ ಹಜ್ ಯಾತ್ರೆ ಕೈಗೊಂಡ ಯುವಕ; ಈತ ಕ್ರಮಿಸಿದ್ದು 8,600 ಕಿ.ಮೀ ದೂರ!
ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸುತ್ತಿದ್ದಂತೆ ತಮ್ಮ ವಾಹನ ಸಂಚಾರಕ್ಕೆ ನೀಡಲಾಗಿದ್ದ ಝೀರೋ ಟ್ರಾಫಿಕ್​ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದರು.
ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಸಚಿವರಾದ ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್‌ ಸೇಠ್, ಶ್ರೀವತ್ಸ, ರವಿಶಂಕರ್, ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್‌ ಗೌಡ, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ಸೇರಿ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ:ಬೆಲೆ ಏರಿಸುತ್ತಾ ಹೋದರೆ ಜನರೇ ಸಿದ್ದರಾಮಯ್ಯನವರ ಸಿಎಂ ಖುರ್ಚಿ ಉರುಳಿಸುವುದು ಗ್ಯಾರಂಟಿ: ರಾಜ್ಯ ಬಿಜೆಪಿ
ಮೈಸೂರು ಜಿಲ್ಲಾ ಪಂಚಾಯತಿ ಆವರಣದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಜನರ ಅಹವಾಲು ನೋಡಿ ಸಮಸ್ಯೆ ಬಗೆಹರಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
