ಬೆಂಗಳೂರು:ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೂ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆಯೇ? ಹೀಗೊಂದು ಸುದ್ದಿ ಮಂಗಳವಾರ ರಾಜಕೀಯ ವಲಯದಲ್ಲಿ ಹರಿದಾಡುತ್ತಿತ್ತು.
ಇದು ನಿಜವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ಆಪ್ತರನ್ನು ಸಂಪರ್ಕಿಸಿದಾಗ ನಿಜವಾದ ವಿಷಯ ಬೆಳಕಿಗೆ ಬಂದಿದೆ. ಅವರು ಮೈಸೂರಿನ ಎಚ್.ಡಿ. ಕೋಟೆ ರಸ್ತೆಯ ಟಿ. ಕಾಟೂರಿನ ಸಮೀಪದಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ಕಳೆದ ಮೂರು ದಿನಗಳಿಂದ ಬೀಡು ಬಿಟ್ಟಿದ್ದಾರೆ. ಅವರ ಜತೆ ಪುತ್ರ, ಶಾಸಕ ಡಾ. ಯತೀಂದ್ರ ಕೂಡ ಇದ್ದಾರೆ.ಇದನ್ನೂ ಓದಿ:ಆರಂಭವಾಗಿದೆ ಲಸಿಕೆ ಸಂಶೋಧನಾ ಕಾರ್ಯದ ಅಂತ್ಯ; ಭಾರತದಲ್ಲಿ ನಾಲ್ಕರ ಉತ್ಪಾದನೆ ಖಚಿತ…!
ಈ ಮಧ್ಯೆ, ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರಾದ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮತ್ತು ಇತರರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ‘‘ಕುಟುಂಬದ ಕಾರ‌್ಯಕ್ರಮವೊಂದು ಇದ್ದ ಕಾರಣ ಅವರು ಇಲ್ಲಿ ತಂಗಿದ್ದಾರೆ. ಸಂಪೂರ್ಣ ಆರೋಗ್ಯದಿಂದಿದ್ದು, ಇನ್ನು ಒಂದೆರಡು ದಿನಗಳಲ್ಲಿ ಬೆಂಗಳೂರಿಗೆ ಮರಳಿ ಬರಲಿದ್ದಾರೆ’’ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.
ಆದರೆ ಇನ್ನು ಕೆಲವರು ‘‘ಸಿದ್ದರಾಮಯ್ಯ ಅವರು ಹೋಮ್ ಕ್ವಾರಂಟೈನ್‌ಗೋಸ್ಕರವೇ ಆಗಮಿಸಿರುವುದು ನಿಜ. ಆದರೆ ಕರೊನಾ ಇಲ್ಲ. ಕುಟುಂಬದವರಿಗೂ ಸೋಂಕಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅವರು ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ’’ ಎಂದು ಸ್ಪಷ್ಟಪಡಿಸಿದ್ದಾರೆ.
ಕರೊನಾ ಲಸಿಕೆ ಜೀವಮಾನದ ಪರಿಹಾರವಲ್ಲ; ಸೀಮಿತ ಪರಿಣಾಮವಷ್ಟೇ ನಿರೀಕ್ಷಿಸಿ; ತಜ್ಞರ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − sixteen =
Remember me
