ಬೆಂಗಳೂರು:ಗಣರಾಜ್ಯೋತ್ಸವದ ನಿಮಿತ್ತ ಲಾಲ್​​ಬಾಗ್​ನಲ್ಲಿ ಆಯೋಜಿಸಲಾಗಿರುವ 215ನೇ ಫಲಪುಷ್ಪ ಪ್ರದರ್ಶನಕ್ಕೆ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಜನವರಿ 18) ಚಾಲನೆ ನೀಡಿದ್ದಾರೆ.
215ನೇ ಫಲಪುಷ್ಟ ಪ್ರದರ್ಶನದಲ್ಲಿ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿದ್ದು, ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಸೇವಂತಿಗೆ, ಗುಲಾಬಿ ಹೂವುಗಳಿಂದ ಅನುಭವ ಮಂಟಪ ನಿರ್ಮಾಣ ಮಾಡಲಾಗಿದೆ. 8 ಬಗೆಯ 32 ಲಕ್ಷ ಹೂವುಗಳನ್ನು ಬಳಕೆ ಮಾಡಲಾಗಿದೆ. ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.
ಮುಖ್ಯಮಂತ್ರಿ@siddaramaiahಅವರು ಇಂದು ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ 2024 ಅನ್ನು ಉದ್ಘಾಟಿಸಿದರು.pic.twitter.com/aGNThd06C3
ಇದನ್ನೂ ಓದಿ:ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ; ಏನದು?
ಫಲಪುಷ್ಟ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಸಾಕಷ್ಟು ಜನ ಸ್ವಾಮೀಜಿಗಳು ನನ್ನನ್ನು ಭೇಟಿ‌ ಮಾಡಿ. ಸಾಂಸ್ಕೃತಿಕ ನಾಯಕ ಅಂತ ಬಸವಣ್ಣನವರನ್ನ ಕರೆಯಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ಮುಂದೆ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತದೆ. ಶಿಕಾರಿಪುರದಲ್ಲಿರುವ 46 ಎಕರೆ ಜೈಲಿನ ಜಾಗಕ್ಕೆ ಅಲ್ಲಮಪ್ರಭು ಎಂದು ನಾಮಕರಣ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಲಾಲ್​ಬಾಗ್​ನಲ್ಲಿ ಎಂದಿನಂತೆ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. 12ನೇ ಶತಮಾನದಲ್ಲಿ ಸಮಾನತೆಯನ್ನು ನಿರ್ಮಿಸಿ ಜಾತಿ ಪದ್ಧತಿ ಹೋಗಲಾಡಿಸುವ ನಿಟ್ಟಿನಲ್ಲಿ ಬಸವಣ್ಣನವರು ಹೋರಾಡಿದ್ದರು. ಬಸವಣ್ಣನವರ ಸಂದೇಶವನ್ನ ಜನರಿಗೆ ತಲುಪಿಸುವ ಕೆಲಸವನ್ನ ತೋಟಗಾರಿಕೆ ಇಲಾಖೆ ಮಾಡಿದೆ. ಬೆಂಗಳೂರು ಜನರು ಇದರ ಸದುಪಯೋಗ ಪಡೆದುಕೊಳ್ಳಿ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಬೆಳವಣಿಗೆಯ ಪರಿಚಯಿಸುವ ಕೆಲಸ ತೋಟಗಾರಿಕೆ ಇಲಾಖೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
