ಕಲಬುರಗಿ:ಗೃಹ ಜ್ಯೋತಿ ಯೋಜನೆಗೆ ಇಂದು ಕಲಬುರಗಿಯ ಎನ್​ವಿ ಮೈದಾನದಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ , AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ , ಉಪಮುಖ್ಯಮಂತ್ರಿ ಡಿಕೆಶಿ, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರಹೀಮ್ ಖಾನ್, ಶರಣಪ್ಪ ದರ್ಶನಾಪೂರ್ ಸೇರಿದಂತೆ ಹಲವು ಸಚಿವರ ಆ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ.

ಇದನ್ನೂ ಓದಿ:ಕರುನಾಡು ಬೆಳಗುವ ಗೃಹಜ್ಯೋತಿ ಯೋಜನೆ ಉದ್ಘಾಟನೆಗೆ ಕ್ಷಣಗಣನೆ : ಕಲಬುರಗಿಯಲ್ಲಿ ಸಕಲ ಸಜ್ಜು

ಬೆಳಗ್ಗೆ 10 ಗಂಟೆಗೆ ಬೆಂಗಳೂರನಿಂದ ಹೊರಟ ಸಿಎಂ ಸಿದ್ದರಾಮಯ್ಯ, ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ‌ ಮೂಲಕ ಸುಮಾರು 11 ಗಂಟೆಗೆ ಕಲಬುರಗಿಗೆ ಆಗಮಿಸಿದ್ದಾರೆ. ನಂತರ ಕಲಬುರಗಿ ವಿಮಾನ ನಿಲ್ದಾಣದಿಂದ ಎನ್​ವಿ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು.

ಇದನ್ನೂ ಓದಿ:ಗೃಹಜ್ಯೋತಿ ಚಾಲನೆ ಕಾರ್ಯಕ್ರಮದಲ್ಲಿ ಭರ್ಜರಿ ಊಟ

ಮುಖ್ಯಮಂತ್ರಿ ಸಿದ್ದರಾಮಯ್ಯ, ಪುಟ್ಟ ಗುಡಿಸಿಲಿನ ಪ್ರತಿಕೃತಿಯ ಲೈಟ್ ಸ್ವಿಚ್​ ಆನ್​ ಮಾಡುವ ಮೂಲಕ ಸಾಂಕೇತಿಕವಾಗಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾದ ಹತ್ತು ಜನರಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿ, ಜಿರೋ ಬಿಲ್ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಸ್ವಾಗತಿಸಿ, ಸಚಿವರಾದ ಡಾ| ಶರಣ ಪ್ರಕಾಶ ಪಾಟೀಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಗೃಹಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ, ಮಧ್ಯಾಹ್ನ ಸುಮಾರು 3:30ರವರೆಗೆ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಬಳಿಕ ಸಂಜೆ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿಲಿದ್ದಾರೆ ಎಂದು ಹೇಳಲಾಗಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 3 =
Remember me
