ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಸದ್ಯಕ್ಕೆ ವರುಣಾ, ಬಾದಾಮಿ ಹಾಗೂ ಕೋಲಾರ ಮೂರು ಕ್ಷೇತ್ರಗಳ ಆಯ್ಕೆ ಸಿದ್ದರಾಮಯ್ಯರ ಮುಂದಿದೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸುವಂತೆ ಭಾರಿ ಒತ್ತಡ ಬಂದಿದ್ದು, ಅಲ್ಲಿನ ಜನರ ನಾಡಿಮಿಡಿತ ಅರಿಯುವ ಸಲುವಾಗಿ ಇಂದು ಕೋಲಾರಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು 300 ಕೆಜಿ ಆಪಲ್ ಹಾರ ಹಾಕಿ ಕ್ರಿಶ್ಚಿಯನ್​ ಮುಖಂಡರು ಸ್ವಾಗತ ಕೋರಿದ್ದಾರೆ.
ಚುನಾವಣಾ ಪ್ರಚಾರಕ್ಕೆಂದು ಸಿದ್ದಪಡಿಸಿರುವ ವಿಶೇಷ ಬಸ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರಕ್ಕೆ ತೆರಳಿದ್ದಾರೆ. ಚುನಾವಣಾ ಸಮಯ ಹತ್ತಿರವಾಗುತ್ತಿದ್ದು, ಪ್ರಚಾರ ಆರಂಭಿಸಲು ರಾಜಕೀಯ ಪಕ್ಷಗಳು ಹಾಗೂ ಹಿರಿಯ ನಾಯಕರು ತಮ್ಮದೇ ಆದಂತಹ ಯೋಜನೆ ರೂಪಿಸಿಕೊಳ್ಳುತ್ತಿದ್ದಾರೆ.

ಇದೀಗ ಚುನಾವಣಾ ಪ್ರಚಾರಕ್ಕೆ ತೆರಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಐಷಾರಾಮಿ ಬಸ್ಸು ಸಿದ್ಧವಾಗಿದೆ. ಈ ಬಸ್ಸು ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಹೊಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − ten =
Remember me
