ಬೆಂಗಳೂರು:ಕಾಂಗ್ರೆಸ್​ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟ ಅಂತಿಮ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಸಿದ್ದರಾಮಯ್ಯ ಅವರ ಹೆಸರು ಫೈನಲ್​ ಆಗಿದೆ. ಡಿ.ಕೆ. ಶಿವಕುಮಾರ್​ ಅವರು ಉಪಮುಖ್ಯಮಂತ್ರಿ ಆಗಲಿದ್ದಾರೆ. ಅಧಿಕೃತ ಘೋಷಣೆ ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿದ್ದು, ಈಗಾಗಲೇ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಯುತ್ತಿದೆ.
ನಾಳೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಚಿವ ಸಂಪುಟ ರಚನೆಯು ಇನ್ನೆರಡು ದಿನದ ಬಳಿಕ ಅಂತಿಮವಾಗಲಿದೆ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ. ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷರಾಗಿ ಡಿಕೆಶಿ ಮುಂದುವರಿಯಲಿದ್ದಾರೆ. ಅಲ್ಲದೆ, ಎರಡು ಪ್ರಮುಖ ಖಾತೆಗಳನ್ನು ಸಹ ಡಿಕೆಶಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಡಿಕೆಶಿ ಅವರು ಇಂಧನ ಮತ್ತು ನೀರಾವರಿ ಖಾತೆಯ ಮೇಲೆ ಕಣ್ಣೀಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದ ಹಳೆಯ ಶಿಷ್ಯರು; ಡಿಕೆಶಿ ಪರ ಪರೋಕ್ಷವಾಗಿ ಬ್ಯಾಟ್ ಬೀಸಿದ ಬಿಜೆಪಿ
ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಬಹುತೇಕ ಫೈನಲ್​ ಆಗಿರುವ ಹಿನ್ನೆಲೆಯಲ್ಲಿ ಸಿದ್ದು ನಿವಾಸದ ಬಳಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಒಂದು ಕೆಎಸ್​ಆರ್​ಪಿ ಸೇರಿ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಿಎಂ ಹುದ್ದೆ ಘೋಷಣೆ ಬಳಿಕ ಸಾಕಷ್ಟು ಜನರ ಸೇರುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲಿಸರು ಬಿಗಿ ಭದ್ರತೆಗೆ ಮುಂದಾಗಿದ್ದಾರೆ.
ಸಿದ್ದರಾಮಯ್ಯ ಅವರ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ಖುಷಿಯಲ್ಲಿ ಈಗಾಗಲೇ ಸಿದ್ದು ನಿವಾಸದ ಮುಂದೆ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬಹುತೇಕ ಸಿಎಂ ಸ್ಥಾನಕ್ಕೆ ಸಿದ್ದು ಹೆಸರೇ ಫೈನಲ್​ ಆಗಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಸಿದ್ದರಾಮಯ್ಯ ಅವರ ಹೆಸರಿಗೆ ಜೈಕಾರ ಹಾಕಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಸಿದ್ದರಾಮಯ್ಯನವರ ಅಸಹಾಯಕತೆ ಕೆಲವರನ್ನು ಪಕ್ಷ ಬಿಡಲು ಪ್ರೋತ್ಸಾಹಿಸಿತ್ತು: ಎಸ್​​.ಟಿ ಸೋಮಶೇಖರ್

ಮೊದಲ ಎರಡು ವರ್ಷ ಸಿಎಂ ಸ್ಥಾನ ಕೊಡಿ, ಇಲ್ಲಾಂದ್ರೆ ಏನೂ ಬೇಡ: ಡಿ.ಕೆ. ಶಿವಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fourteen =
Remember me
