ಬೆಳಗಾವಿ:ಚುನಾವಣಾ ಕಣ ರಂಗೇರುತ್ತಿದ್ದು ರಾಜಕೀಯ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳೂ ಹೆಚ್ಚಾಗುತ್ತಿವೆ. ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲವೋ ಎನ್ನುವಷ್ಟರ ಮಟ್ಟಿಗೆ ವಾಗ್ದಾಳಿಗಳು ನಡೆಯುತ್ತವೆ. ಆದರೆ ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ಇದು ರಾಜಕೀಯ ನಾಯಕರ ನಡುವೆ ವೈಯಕ್ತಿಕ ದ್ವೇಷ ಇರಲೇ ಬೇಕು ಎಂದೇನಿಲ್ಲ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ.


ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭ ಇಬ್ಬರೂ ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಈ ಸಂದರ್ಭ ಸಿದ್ದರಾಮಯ್ಯ, ಕುಷಲೋಪರಿಯ ಭಾಗವಾಗಿ ಸಿಎಂ ಬೊಮ್ಮಾಯಿಯ ಬೆನ್ನು ತಟ್ಟಿದ್ದಾರೆ. ಇದಾದ ಮೇಲೆ ಇಬ್ಬರೂ ಶೇಕ್​ಹ್ಯಾಂಡ್​ ನೀಡಿದ್ದು ಅಲ್ಲಿಂದ ತೆರಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
