ನವದೆಹಲಿ:ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿರುವುದಾಗಿ ಹೇಳಿದ್ದು, ಯಾವ ವಿಚಾರವಾಗಿ ಮಾತನಾಡಿದ್ದೇವೆ ಎನ್ನುವುದನ್ನು ಬಹಿರಂಗ ಪಡಿಸಲಾಗದು ಎಂದು ಅವರು ಹೇಳಿದ್ದಾರೆ.
ರಾಹುಲ್​ ಗಾಂಧಿ, ಕೆ.ಸಿ.ವೇಣುಗೋಪಾಲ್​ ಮತ್ತು ಎಂ.ಕೆ.ಆಂಟನಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ರಾಜ್ಯದಲ್ಲಿ ವಿವಿಧ ಸಮುದಾಯದವರು ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಅವರೇ ಹೋರಾಟಕ್ಕೆ ನಿಂತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಅವರ ಪಕ್ಷದ ಸರ್ಕಾರವೇ ಆಡಳಿತದಲ್ಲಿದೆ. ಹಾಗಿರುವಾಗ ಈಶ್ವರಪ್ಪ ಅವರು ಮೀಸಲಾತಿಗಾಗಿ ಪಾದಯಾತ್ರೆ ಮಾಡುವುದು ಸರಿಯಲ್ಲ. ಅವರ ನಾಯಕರ ಬಳಿ ಕುಳಿತು ಚರ್ಚೆ ಮಾಡಿ, ಅವರ ಗಮನ ಸೆಳೆದು ಕೆಲಸ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಏನೇ ಆದರೂ ಮೊದಲು ಕುಲಶಾಸ್ತ್ರ ಅಧ್ಯಯನದ ವರದಿ ಬರಬೇಕು. ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದ ಮೇಲೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಆಮೇಲೆ ಸಂವಿಧಾನದಲ್ಲಿ ತಿದ್ದುಪಡಿ ತರಬೇಕು ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ಶುರುವಾಯ್ತು ದೀದಿಯ ‘ಮಾ’ ಕ್ಯಾಂಟೀನ್​; ವೋಟ್​ ಬ್ಯಾಂಕಿಂಗ್​ ತಂತ್ರ ಎಂದು ಕಾಲೆಳೆದ ಬಿಜೆಪಿ

ಗ್ರೆಟಾ ಜತೆ ದಿಶಾ ಸಂಭಾಷಣೆ ಹೇಗಿತ್ತು ಗೊತ್ತಾ? ಟೂಲ್​ಕಿಟ್​ನಲ್ಲಿತ್ತು ಈ ಎಲ್ಲ ಮಾಹಿತಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − one =
Remember me
