ಮೈಸೂರು:ಸಿದ್ದರಾಮಯ್ಯ ಅವರ ಸುತ್ತಲೂ ಇರುವವರು ಭಯೊತ್ಪಾದಕರು ಆದರೂ ಅವರಿಗೆ ಕಾಣುತ್ತಿಲ್ಲ. ಹಾಗಾಗಿ ಅವರಿಗೆ ದೃಷ್ಟಿ ದೋಷವಿರಬಹುದು ಅದನ್ನು ಸರಿಪಡಿಸಿಕೊಳ್ಳಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್​ಎಸ್​ಎಸ್​ ನೂರಾರು ವಿದ್ಯಾಸಂಸ್ಥೆಗಳನ್ನು ಕಟ್ಟಿದೆ, ಶುಲ್ಕವಿಲ್ಲದೇ ಕೆಲವು ಕಡೆ ಶಿಕ್ಷಣವನ್ನೂ ನೀಡುತ್ತಿದೆ. ಇವೆಲ್ಲಾ ಅವರಿಗೆ ಕಾಣುವುದಿಲ್ಲ. ನಿಮ್ಮದೇ ಶಾಸಕರ ಮನೆಗೆ ಬೆಂಕಿ ಬಿತ್ತು, ಅವರಿಗೆ ನಿಮ್ಮ ಬೆಂಬಲಿಗರೇ ಜಾಮೀನು ಕೊಡಿಸಿದ್ದಾರೆ. ಹೀಗಾದರೂ ಕಾಣುತ್ತಿಲ್ಲವೆಂದರೆ ನಿಮಗೆ ದೃಷ್ಟಿ ದೋಷವೇ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರಿಗೆ ಚಿಕಿತ್ಸೆ ಅಗತ್ಯವಿದೆ. ಅವರಿಗೆ ವಯಸ್ಸಾಗುತ್ತಿದೆ. ಈಗಲಾದರೂ ಸುಳ್ಳನ್ನು ಹೇಳುವುದನ್ನು ಬಿಡಲಿ, ಆರ್​​ಎಸ್​ಎಸ್​ಗೆ ನಿಮ್ಮ ಸರ್ಟಿಫಿಕೇಟ್​ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ತಪ್ಪಿನ ಅರಿವಾಗಲಿದೆ ಎಂದು ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್​)
ರೈತರ ಖಾತೆಗೆ ಬಂತು ಹಣ: ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ

ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಬಾಲಕನ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
