ಮೈಸೂರು:ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ದೇಶಾದ್ಯಂತ ಸದ್ದು ಮಾಡುತ್ತಿದೆ. ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಎಷ್ಟಾಗಬಹುದು ಎಂಬುದರ ಬಗ್ಗೆ ಊಹಾಪೋಹ, ಲೆಕ್ಕಾಚಾರ, ಎಲ್ಲವೂ ರಾಜಕೀಯ ಪಕ್ಷಗಳ ಒಳಗೆ ನಡೆಯುತ್ತಿದೆ. ಈ ಸಂದರ್ಭ ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಜರಾತ್​-ಹಿಮಾಚಲ ಪ್ರದೇಶದ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
‘ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದೆ, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ. ನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ. ಗುಜರಾತ್‌ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ಕಾಂಗ್ರೆಸ್​ನ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ಕಾಂಗ್ರೆಸ್​ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್‌ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಕಾಂಗ್ರೆಸ್‌ ಪಕ್ಷ ಮುನ್ನಡೆಯಲ್ಲಿದೆ, ಹಾಗೆಯೇ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂಬ ಮಾಹಿತಿ ಇದೆ’ ಎಂದು ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
‘ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ ಎಂಬುದು ನನ್ನ ಅನಿಸಿಕೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಫಲಿತಾಂಶದ ಬಗ್ಗೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
