ಬೆಂಗಳೂರು :ರಾಜಾರಾಜೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸೋಲಿನ ಭೀತಿಯಿಂದಾಗಿ ಹರಾಶಗೊಂಡಿರುವ ಬಿಜೆಪಿ ಈ ರೀತಿ ವರ್ತಿಸುತ್ತಿದೆ. ಪ್ರಚಾರಕ್ಕೆ ಅಡ್ಡಪಡಿಸಿ ಗೂಂಡಾ ವರ್ತನೆ ತೋರಿದ ಬಿಜೆಪಿಯ ಬಿಬಿಎಂಪಿ‌ ಮಾಜಿ ಸದಸ್ಯ ಜಿ.ಕೆ. ವೆಂಜಟೇಶ್ ಮತ್ತವರ ಬೆಂಬಲಿಗರನ್ಬು ಕೂಡಲೇ ಬಂಧಿಸುವಂತೆ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ವೆಂಕಟೇಶ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಯಶವಂತಪುರ ಪೊಲೀಸ್ ಠಾಣೆ ಮುಂಭಾಗ ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:‘ಮಂತ್ರಿ ಸ್ಥಾನ ಬಿಟ್ಟು ಬಂದವನು ನಾನು..ಖಂಡಿತ ಮತ್ತೆ ಮಂತ್ರಿಯಾಗುತ್ತೇನೆ..’
ಯಶವಂತಪುರ ವಾರ್ಡ್ ನ ಬಿ.ಕೆ. ನಗರದಲ್ಲಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದಾಗ ಅಲ್ಲಿಗೆ ಬಂದ ವೆಂಕಟೇಶ್ ಮತ್ತವರ ಬೆಂಬಲಿಗರು ಪ್ರಚಾರಕ್ಕೆ ಅಡ್ಡಿಯುಂಟು ಮಾಡಿದರು. ಪ್ರಚಾರದ ವಾಹನ ಮುಂದಕ್ಕೆ ಹೋಗದಂತೆ ತಡೆದರು. ಹಿಂದಕ್ಕೆ ಹೋಗಲು ಒಪ್ಪದ ಸಿದ್ದರಾಮಯ್ಯ ಅವರು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಕರೆ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಚದುರಿಸಿದರು.
ಬಿಜೆಪಿಯ ಇಂಥ ಗೂಂಡಾ ವರ್ತನೆಗೆ ಕಾಂಗ್ರೆಸ್ ಬಗ್ಗುವುದಿಲ್ಲ. ಇಂಥ ಘಟನೆ ಮರುಕಳಿಸಿದರೆ ಬಿಜೆಪಿಯವರ ಪ್ರಚಾರ ಸಭೆಗಳಿಗೆ ನಾವೂ ಅಡ್ಡಿ ಉಂಟು ಮಾಡಬೇಕಾಗುತ್ತದೆ. ಚುನಾವಣೆ ನ್ಯಾಯಸಮ್ಮತವಾಗಿ ನಡೆಯಬೇಕು. ಮುನಿರತ್ನ ಅವರ ಗೂಂಡಾಗಿರಿಗೆ ಮತದಾರರು ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಅವರು‌ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 14 =
Remember me
