ಬೆಂಗಳೂರು:ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ವತಿಯಿಂದ ಆಯೋಜಿಸಿರುವ “ನಾ ನಾಯಕಿ” ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ಸರ್ಕಾರ ಕಳೆದ ಚುನಾವಣಾ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ 21 ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ, ಮಹಿಳೆಯರಿಗಾಗಿ ಒಂದೇ ಒಂದು ಕಾರ್ಯಕ್ರಮ ಮಾಡಿಲ್ಲ ಎಂದು ಟೀಕಿಸಿದರು.
ಬಿಜೆಪಿ ನಾಯಕರು ವಚನ ಭ್ರಷ್ಟರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ತನ್ನ ಪ್ರಣಾಳಿಕೆಯಲ್ಲಿದ್ದ ಶೇ.10 ರಷ್ಟು ಭರವಸೆಯನ್ನೂ ಈಡೇರಿಸಿಲ್ಲ. ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ನಾಯಕರು ಸುಳ್ಳು ಭರವಸೆ ನೀಡಲು ಆರಂಭಿಸಿದ್ದಾರೆ. ಬಿಜೆಪಿ ಎಂದಿಗೂ ಮಹಿಳೆಯರ ಪರವಾಗಿಲ್ಲ. ಇದೇ ಜನ ಮನುಸ್ಮೃತಿಯ ಮೂಲಕ ಮಹಿಳೆಯರನ್ನು ದಮನ ಮಾಡಿದ್ದರು. ಬಾಬಾ ಸಾಹೇಬರು ಸಂವಿಧಾನ ರಚಿಸಿದ ಕಾರಣಕ್ಕೆ ಇಂದು ಈ ದೇಶದ ಮಹಿಳೆಯರಿಗೆ ಎಲ್ಲಾ ಹಕ್ಕುಗಳು ಸಿಗುತ್ತಿವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿಯ "ನಾ ನಾಯಕಿ‌" ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು, ದೇಶದ ಮಹಿಳೆಯರ ಶ್ರೇಯೋಭಿವೃದ್ಧಿಯಲ್ಲಿ ಕಾಂಗ್ರೆಸ್ ನ ಕೊಡುಗೆಗಳನ್ನು ಸ್ಮರಿಸಿದೆ.pic.twitter.com/VzuzdIR7eu— Siddaramaiah (@siddaramaiah)January 16, 2023
ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿಯ "ನಾ ನಾಯಕಿ‌" ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು, ದೇಶದ ಮಹಿಳೆಯರ ಶ್ರೇಯೋಭಿವೃದ್ಧಿಯಲ್ಲಿ ಕಾಂಗ್ರೆಸ್ ನ ಕೊಡುಗೆಗಳನ್ನು ಸ್ಮರಿಸಿದೆ.pic.twitter.com/VzuzdIR7eu
ಮಹಿಳೆಯರ ಅಭಿವೃದ್ಧಿಯಿಂದ ದೇಶ ಸಮೃದ್ದಿಯಾಗುತ್ತದೆ. ಅಂದು ಚಾಲ್ತಿಯಲ್ಲಿದ್ದ ಸತಿಸಹಗಮನ ಪದ್ದತಿನ್ನು ನೆಹರು ತೊಡೆದು ಹಾಕುವ ಕೆಲಸ ಮಾಡಿದರು. ಹಿಂದೂ ವಿವಾಹ ಕಾಯ್ದೆ ಜಾರಿಗೆ ತಂದರು. 1961ರಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೆ ಬಂತು. 2011ರ ಜನಗಣತಿ ಪ್ರಕಾರ 64% ಮಹಿಳೆಯರು ಶಿಕ್ಷಣ ಪಡೆದಿದ್ದಾರೆ. ಇದೆಲ್ಲ ಕಾಂಗ್ರೆಸ್ ಸರ್ಕಾರದ ಕೊಡುಗೆಯಿಂದ ಸಾಧ್ಯವಾಗಿದೆ.
ಪಂಚಾಯತಿಯಲ್ಲಿ 50% ಮೀಸಲಾತಿ ಇರುವುದು ಕಾಂಗ್ರೆಸ್ ಕಾರಣದಿಂದ. ವಿಧಾನಸಭೆ ಮತ್ತು‌ ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಬೇಕು. ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲಿ 33% ಮೀಸಲಾತಿ ನೀಡಬೇಕು ಎಂಬ ಬಿಲ್‌ ಅನ್ನು 1995ರಲ್ಲಿ ಲೋಕಸಭೆ ಮುಂದೆ ತರಲಾಗಿದೆ. ಈ ಬಿಲ್ ಇನ್ನು ಹಾಗೆ ಇದೆ. ಒಂದು ವೇಳೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ನೀಡುವ ಈ ಬಿಲ್‌ ಅನ್ನು ಪಾಸ್‌ ಮಾಡಿ ಜಾರಿ ಮಾಡುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಮಹಿಳೆಯರ ಮೀಸಲಾತಿ ಹಕ್ಕೋತ್ತಾಯ‌ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
