ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯರೋಪಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇನ್ನು ಮಂಗಳವಾರ ಬಿಡುಗಡೆಯಾದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಬಿಜೆಪಿ-ಕಾಂಗ್ರೆಸ್​ ನಡುವೆ ಜಟಾಪಟಿ ಏರ್ಪಟ್ಟಿದ್ದು ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ.ಇದರಲ್ಲಿ ತಪ್ಪೇನಿದೆ? 1/2
ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ.
ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ.ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು,@BJP4Karnatakaನಾಯಕರಿಗೆ ಯಾಕೆ ಆಗುತ್ತಿದೆ? 2/2
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
