ಬೆಂಗಳೂರು:ಈಗ ಆಡಳಿತ ನಡೆಸುತ್ತಿರುವವರು ಏನಾದರೂ ಜನರ ಬಳಿಗೆ ಹೋದರೆ ಬಡಿಗೆ ಏಟು ಬೀಳುವುದು ಖಚಿತವೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಜನರ ಬಳಿಗೆ ಹೋಗಿ ಬಡಿಗೆ ತೆಗೆದುಕೊಂಡು ಹೊಡೆಯುತ್ತಾರೆ ಎಂದು ಯಡಿಯೂರಪ್ಪ ಅವರು ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ನಮಗೆ ಹೇಳುತ್ತಿದ್ದರು. ಆದರೆ ನಮಗೆ ಯಾರೂ ಹೊಡೆಯಲಿಲ್ಲ. ಈಗ ಆಡಳಿತ ನಡೆಸುತ್ತಿರುವವರು ಏನಾದರೂ ಜನರ ಬಳಿಗೆ ಹೋದರೆ ಬಡಿಗೆ ಏಟು ಖಚಿತವೆಂದರು. ಬೆಂಗಳೂರಿನ ಚಿತ್ರಣವನ್ನೇ ಬದಲಾವಣೆ ಮಾಡುವುದಾಗಿ ಯಡಿಯೂರಪ್ಪ ಅವರು ಹೇಳಿದ್ದರು. ಅನುದಾನವೇ ಇಲ್ಲದ ಮೇಲೆ ಚಿತ್ರಣವನ್ನು ಅವರು ಹೇಗೆ ಬದಲಾವಣೆ ಮಾಡುವರೋ ತಿಳಿಯದು ಎಂದು ಹೇಳಿದರು.
ಇದನ್ನೂ ಓದಿ:ಸಾಲ ಬರೆ ಜನರಿಗೆ ಹೊರೆ: ಸಂಪನ್ಮೂಲ ಹೆಚ್ಚಳಕ್ಕೆ ಸರ್ಕಾರ ಸರ್ಕಸ್, ತೆರಿಗೆ ಭಾರ ಬಹುತೇಕ ಫಿಕ್ಸ್
ಡ್ರಗ್ಸ್ ಪ್ರಕರಣದ ಕುರಿತು ಮಾತನಾಡಿದ ಅವರು, ಈ ವಿಚಾರದಲ್ಲಿ ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಪ್ರಮುಖ ಆರೋಪಿಗಳನ್ನು ಬಂಧಿಸಿದಂತೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಲಿ ಎಂದರು.
ಇದನ್ನೂ ಓದಿ:ಚೀನಾದ ಐಟಿ ಕಂಪನಿಗಳು ಗಣ್ಯ ವ್ಯಕ್ತಿಗಳ ಮೇಲೆ ನಿಗಾ: ಉನ್ನತ ಮಟ್ಟದ ಸಮಿತಿಯಿಂದ ತನಿಖೆ
ಡ್ರಗ್ಸ್ ಹಗರಣದಲ್ಲಿ ಪ್ರಮುಖ ಆರೋಪಿಗಳನ್ನು ಪೊಲೀಸರು ಇದುವರೆಗೂ ಬಂಧಿಸಿಲ್ಲ. ಸರ್ಕಾರದ ಒತ್ತಡವೂ ಇದಕ್ಕೆ ಕಾರಣ ಇರಬಹುದು. ಅದನ್ನು ನಾನು ಅಲ್ಲಗಳೆಯುವುದಿಲ್ಲ. ಪೊಲೀಸರು ಈ ವಿಷಯದಲ್ಲಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ಸರ್ಕಾರ ಹೇಳಿದಂತೆ ಕೇಳುತ್ತಿದ್ದಾರೆ ಎಂದು ಹೇಳಿದರು.
‘ನ್ಯಾಷನಲ್ ಅನ್​​ಎಂಪ್ಲಾಯ್ಮೆಂಟ್ ಡೇ’ ಟ್ರೆಂಡಿಂಗ್ ರಹಸ್ಯ ಇದೇನಾ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine − three =
Remember me
