ಮೈಸೂರು:ಬರಗಾಲದಲ್ಲೂ ಜನ ಸಂತೋಷವಾಗಿದ್ದಾರಲ್ಲಾ ಎಂಬುದೇ ಖುಷಿ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಬನ್ನಿಮಂಟಪದಲ್ಲಿರುವ ಪಂಜಿನ ಕವಾಯತು ಮೈದಾನದಲ್ಲಿ ದಸರಾ ಅಂಗವಾಗಿ ಆಯೋಜಿಸಲಾಗಿದ್ದ ಏರ್​ಶೋ ವೀಕ್ಷಣೆ ಬಳಿಕ ಮಾತನಾಡಿದ ಸಿಎಂ ದಸರಾ ಅಂದರೆ ಜನರ ಹಬ್ಬ, ನಾಡಹಬ್ಬ. ಜನರು ಖುಷಿಯಾಗಿರುವುದು ಮುಖ್ಯ ಎಂದಿದ್ದಾರೆ.
ನಾನು ದೆಹಲಿಗೆ ಭೇಟಿ ನೀಡಿದ್ದ ವೇಳೆ ಕೇಂದ್ರ ರಕ್ಷಣಾ ಸಚಿವರಾದ ರಾಜ್​ನಾಥ್​ ಸಿಂಗ್​ ಅವರಿಗೆ ಈ ಬಾರಿಯ ದಸರಾದಲ್ಲಿ ಏರ್​ಶೋ ಆಯೋಜಿಸುವಂತೆ ಮನವಿ ಮಾಡಿದ್ದೆ. ಅವರು ಸಹ ಒಪ್ಪಿಗೆ ಸೂಚಿಸಿದರು. ಅದರಂತೆ ಏರ್​ಶೋ ನಡೆದಿದೆ. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಒಮ್ಮೆ ಏರ್​ಶೋ ಮಾಡಿಸಿದ್ದೆ.
ಮುಖ್ಯಮಂತ್ರಿ@siddaramaiahಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಭಾರತೀಯ ವಾಯುಪಡೆ ವತಿಯಿಂದ ನಾಡಹಬ್ಬ ದಸರಾ- 2023 ಪ್ರಯುಕ್ತ ಆಯೋಜಿಸಿದ್ದ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಿದರು.#ಮೈಸೂರುದಸರಾ2023#MysuruDasara2023pic.twitter.com/ZZJbPgwcGv
ಇದನ್ನೂ ಓದಿ:ಹೆಂಡತಿ-ಮಗನ ಮೇಲೆ ಲಾರಿ ಹರಿಸಿ ಕೊಂದ ಕ್ರೂರಿ; ಆರೋಪಿ ಅರೆಸ್ಟ್
ದಸರಾ ಅಂದರೆ ಜನರ ಹಬ್ಬ, ನಾಡಹಬ್ಬ. ಜನರು ಖುಷಿಯಾಗಿರುವುದು ನಮಗೆ ಮುಖ್ಯ. ಆದರೆ, ಈ ಬಾರಿ ರಾಜ್ಯದಲ್ಲಿ ಬರಗಾಲ ಬಂದಿದೆ. ಅದರ ನಡುವೆಯೂ ಜನರು ಖುಷಿಯಾಗಿರುವುದು ಸಂತಸದ ವಿಚಾರ ಎಂದು ಹೇಳಿದ್ದಾರೆ.
ಬರ ಪರಿಹಾರ ಕಾಮಗಾರಿಗಳು ನಡೆಯುತ್ತಿದೆ. ದುಡಿಯುವ ಕೈಗಳಿಗೆ ಕೆಲಸ ಕೊಡುತ್ತಿದ್ದೇವೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಜಾನುವಾರುಗಳಿಗೆ ಮೇವು ಒದಗಿಸಲಾಗುತ್ತಿದೆ. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.
ಕುಡಿಯುವ ನೀರು ಹಾಗೂ ಮೇವಿನ ವಿಚಾರದಲ್ಲಿ ಎಷ್ಟೇ ಹಣ ಖರ್ಚಾದರೂ ಕೊಡುತ್ತೇವೆ ಎಂದು ಹೇಳಿದ್ದೇವೆ. ಮೇವಿಗೆ ಯಾವುದೇ ಅಭಾವವಿಲ್ಲ. ಸಾಕಷ್ಟು ಮೇವನ್ನು ಸಂಗ್ರಹಿಸಲಾಗಿದ್ದು, ಹೊಸದಾಗಿ ಬೆಳೆಯಲು ಹಾಗೂ ಸಂಗ್ರಹಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್​ಶೋ ವೀಕ್ಷಣೆ ಬಳಿಕ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
