ಬೆಂಗಳೂರು: ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಗ್ಯಾರೆಂಟಿ ಭರವಸೆ ಅನುಷ್ಠಾನ ಮಾಡಿರುವುದನ್ನು ತಮ್ಮ ಪಕ್ಷದ ಹೈಕಮಾಂಡ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹೈಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿ ಶಹಬ್ಬಾಸ್‌ಗಿರಿ ನೀಡಿದೆ.ಲೋಕಸಭೆ ಚುನಾವಣೆ ತಯಾರಿ ಕುರಿತು ಬುಧವಾರ ನಡೆದ ಸಭೆಯಲ್ಲಿ ಗ್ಯಾರೆಂಟಿ ಅನುಷ್ಠಾನದ ವಿವರಣೆಯನ್ನು ಸಿದ್ದರಾಮಯ್ಯ ನೀಡಿದ್ದರು.ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಐದು ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಸದಾಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ವಿವರಿಸಿದರು.ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ ಎಂದರು.ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen + fifteen =
Remember me
