ಬೆಂಗಳೂರು:ಮಂಗಳೂರಲ್ಲಿ ಸಂಭವಿಸಿದ ಆಟೋ ಸ್ಫೋಟ ಪ್ರಕರಣವು ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ರಾಜ್ಯದ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ಕಳವಳಕಾರಿಯಾದ ಈ ಘಟನೆ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿಕೇಳಿಕೊಳ್ಳುತ್ತಿದ್ದೇನೆ.#MangaluruBlast2/2
— Siddaramaiah (@siddaramaiah)November 20, 2022

ಮಂಗಳೂರು ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ವಿಧ್ವಂಸಕ ಕೃತ್ಯ, ಭಯೋತ್ಪಾದಕ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ದೃಢೀಕರಿಸಿದ್ದಾರೆ. ಮಂಗಳೂರಲ್ಲಿ ಸಂಭವಿಸಿದ ಬಾಂಬ್​ ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್‌ವೆಲ್​ಗೆ ಪ್ರಯಾಣ

ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣ: ತುಮಕೂರಿನ ರೈಲ್ವೆ ಸಿಬ್ಬಂದಿ ಹೆಸರಲ್ಲಿ ಆಧಾರ್​ ಕಾರ್ಡ್ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eighteen =
Remember me
