ಬೆಂಗಳೂರು:ಕರೊನಾ ಸೋಂಕು ಹಾವಳಿ ಎಬ್ಬಿಸಿರುವ ಈ ಸಮಯದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಪ್ರತಿಯೊಬ್ಬ ಬಡವರಿಗೂ ತಲಾ 10 ಸಾವಿರ ರೂ. ಹಂಚುತ್ತಿದ್ದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ನೂತನ ಅಧ್ಯಕ್ಷರ ಪ್ರತಿಜ್ಞಾವಿಧಿ ಸಮಾರಂಭದ ಸಿದ್ಧತೆಗಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘‘ಯಡಿಯೂರಪ್ಪನವರ ಜಾಗದಲ್ಲಿ ಇವತ್ತು ನಾನಿದ್ದರೆ ದುರ್ಬಲ ವರ್ಗದವರಿಗೆ, ಬಡವರಿಗೆ, ಹಣದ ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ಸರ್ಕಾರದಿಂದ 10 ಸಾವಿರ ರೂ. ಕೊಡುತ್ತಿದ್ದೆ. ಅದರಿಂದ ಅವರ ಖರೀದಿ ಶಕ್ತಿ ಹೆಚ್ಚುತ್ತಿತ್ತು” ಎಂದು ಹೇಳಿದರು.ಇದನ್ನೂ ಓದಿರಿಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ಕೆಪಿಸಿಸಿಯ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್ ಮುಂತಾದವರು ಭಾಗವಹಿಸಿದ್ದರು. ಪ್ರತಿಜ್ಞಾವಿಧಿ ಕಾರ್ಯಕ್ರಮ ಜುಲೈ 2ಕ್ಕೆ ನಿಗದಿಯಾಗಿದೆ.
ಡಿಕೆಶಿ ಸಮ್ಮುಖದಲ್ಲೇ ಕರೊನಾ ನಿಯಮ ಗಾಳಿಗೆ ತೂರಿದ ‘ಕೈ’ ಪಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
