ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು | ಚಾಕೊಲೇಟ್ ತಂದು ಕೊಟ್ಟಿಲ್ಲವೆಂದು ಬದುಕು ಅಂತ್ಯಗೊಳಿಸಿದ ವಿವಾಹಿತೆ!
ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಇದೆಲ್ಲ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ನಡೆಯುತ್ತಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!
ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಸರ್ಕಾರ ಕೆಂಪು ಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್​ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರ ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿದ್ದೆವು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಏನು ಕಾರಣ? ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಇದು ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ಯಾಕಿನ್ನೂ ಟಿಕೆಟ್ ಘೋಷಿಸಿಲ್ಲ ಎಂದ ಡಿಕೆಶಿ; ಇತ್ತ ದೆಹಲಿಗೆ ಹಾರಲು ಸಜ್ಜಾದ ಬಿಎಸ್​ವೈ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
