ಗದಗ:ಎಲ್ಲರಿಗೂ ಟಿಕೆಟ್‌ ಕೊಡಕ್ಕಾಗಲ್ಲ… ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್… ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ಪ್ರಜಾಧ್ವನಿ ಸಮಾವೇಶದ ವೇಳೆ ಟಿಕೆಟ್ ಆಕಾಂಕ್ಷಿ ಪ್ರಕಾಶ್ ಕುರಿ ಬೆಂಬಲಿಗರ ಘೋಷಣೆಗೆ ಸಿದ್ದರಾಮಯ್ಯ ಗರಂ ಆದ ಸನ್ನಿವೇಶ ಎದುರಾಯಿತು.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ 14 ಜನರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ಗೆಲ್ಲುವಂತ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುತ್ತೇವೆ. ಟಿಕೆಟ್ ಸಿಕ್ಕಿಲ್ಲ ಎಂದು ಕಾಲೆಳೆಯುವ ಕೆಲಸ ಮಾಡಬಾರದು. ನಮ್ಮ ಉದ್ದೇಶ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವುದಾಗಿದೆ. ಪಕ್ಷಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಮಾತನಾಡುತ್ತಾ, ರಾಜ್ಯದಲ್ಲಿ ಭ್ರಷ್ಟ ಕೋಮುವಾದಿ ಪಕ್ಷ ಆಡಳಿತದಲ್ಲಿದೆ. ಬಿಜೆಪಿ ದಲಿತರ, ಹಿಂದುಳಿದವರ ವಿರೋಧಿಯಾಗಿದೆ. ಈ ಬಾರಿ ಬಿಜೆಪಿಯನ್ನು ಮನೆಗೆ ಕಳುಹಿಸುವುದುಕ್ಕೆ ಜನರು ಕಾಯುತ್ತಿದ್ದಾರೆ. 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಬಿಜೆಪಿಯಷ್ಟು ಭ್ರಷ್ಟ ಸರಕಾರವನ್ನು ಕಂಡಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seven =
Remember me
