ಬೆಂಗಳೂರು :ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕರೊನಾ ಕಾಲದ ವಿದ್ಯುತ್, ನೀರಿನ ಶುಲ್ಕಗಳನ್ನು ಮನ್ನಾ ಮಾಡುವುದು ಸೇರಿದಂತೆ, ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೇ ಇರುವ ಕಾರಣ, ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲಿಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ:ರಾಮಲಿಂಗಾರೆಡ್ಡಿಯವರು ಕಾಂಗ್ರೆಸ್ ಪಕ್ಷದ ಮುಂದಿನ ಡಿಸಿಎಂ: ಜಾಲತಾಣದಲ್ಲಿ ಭರ್ಜರಿ ಕ್ಯಾಂಪೇನ್
ಮತ್ತೊಂದೆಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿರುವ ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡೀ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿದ್ದ ವಸತಿಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ ಎಂದಿದ್ದಾರೆ.
ಶುಭಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್​ಗಳು​​, ಡೆಕೊರೇಟರ್​​ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇವರೆಲ್ಲರ ಸಂಕಷ್ಟದ ಬಗ್ಗೆ ಸರ್ಕಾರ ಕುರುಡಾಗಿದ್ದು, ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ ಎಂದಿರುವ ಸಿದ್ದರಾಮಯ್ಯ, ತೀವ್ರ ಬಿಕ್ಕಟ್ಟಿನಲ್ಲಿರುವ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು. ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10,000 ರೂ.ಗಳನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಬ್ಲ್ಯಾಂಕ್ ಫಂಗಸ್ ಔಷಧಿ : ರಾಜ್ಯಕ್ಕೆ ಹೆಚ್ಚುವರಿ 5,240 ವಯಲ್ಸ್​ ಹಂಚಿಕೆ
ಕರೊನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ ರೂ. 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ. ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂ.ಗಳ ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದಿದ್ದಾರೆ. ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೇ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ 1500 ಕೋಟಿ ರೂ. ಮಾತ್ರ. ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 193.65 ಕೋಟಿ ರೂ. ಅನುಮೋದನೆ

VIDEO | ಮೆಟ್ರೋದಲ್ಲಿ ಮಂಗ! ಸಭ್ಯವಾಗಿ ಸೀಟಲ್ಲಿ ಕೂತು ಪ್ರಯಾಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
